12:13 PM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕೆಎಸ್‌ಒಯು: ಏಪ್ರಿಲ್ 7ರಂದು ಬೃಹತ್ ಉದ್ಯೋಗ ಮೇಳ; 80ಕ್ಕೂ ಹೆಚ್ಚು ಕಂಪನಿಗಳ ಪಾಲ್ಗೊಳ್ಳುವಿಕೆ

03/04/2022, 09:05

ಮೈಸೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಏಪ್ರಿಲ್ 7ರಂದು ಬೃಹತ್ ಉದ್ಯೋಗ ಮೇಳವನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದೆ ಎಂದು ಮುಕ್ತ ವಿವಿ ಕುಲಪತಿ ಎಸ್.ವಿದ್ಯಾಶಂಕರ್ ತಿಳಿಸಿದರು.

ವಿವಿ ಆಡಳಿತ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉದ್ಯೋಗ ಮೇಳದಲ್ಲಿ 80ಕ್ಕೂ ಹೆಚ್ಚು ಕಂಪೆನಿಗಳು ಪಾಲ್ಗೊಳ್ಳುತ್ತಿದ್ದು, ತಾಂತ್ರಿಕ ಮತ್ತು  ತಾಂತ್ರಿಕೇತರ ವಿದ್ಯಾರ್ಥಿಗಳು ನಿರುದ್ಯೋಗಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು  ಹೇಳಿದರು.

ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಅಶ್ವಿನ್‌ಗೌಡ ಮಾತನಾಡಿ, ಉದ್ಯೋಗ ಮೇಳವು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಇದರಲ್ಲಿ ಆಯ್ಕೆಯಾಗದವರಿಗೆ ತಮ್ಮ ಇಚ್ಛೆಯ ಅನುಸಾರವಾಗಿ ತರಬೇತಿ ನೀಡಿ ಉದ್ಯೋಗವನ್ನು ದೊರಕಿಸಿಕೊಡಲಾಗುವುದು. – ಹಾಗೆಯೇ ಸುತ್ತಮುತ್ತಲಿನ ಜಿಲ್ಲೆಗಳ ನಿರುದ್ಯೋಗಿಗಳಿಗೆ ಅವಕಾಶ ಮಾಡಿಕೊಡಲಾಗುವುದು. 6000 ಜನರಿಗೆ ಉದ್ಯೋಗ ನೀಡುವ ಭರವಸೆ ಇದೆ ಎಂದರು.ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಜಗನಾಥ್, ವಿವಿ ಪ್ಲೇಟ್‌ಮೆಂಟ್ ಆಫೀಸರ್ ಹೆಚ್‌.ಆರ್‌. ಪವಿತ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು