6:59 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

KSRTC | ಬಿಜೆಪಿ ಸರಕಾರ ಶೇ 47ರಷ್ಟು ಬಸ್ ದರ ಏರಿಕೆ ಮಾಡಿತ್ತು, ನಮ್ಮ ಸರ್ಕಾರ ಶೇ.15ರಷ್ಟು ಮಾತ್ರ ಮಾಡಿದೆ: ಮುಖ್ಯಮಂತ್ರಿ

17/03/2025, 20:13

ಬೆಂಗಳೂರು(reporterkarnataka.com): ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .
ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಲಾಗಿದೆ. ಇವರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ರಾಹುಲ್ ಗಾಂಧಿ ಯವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದರು. ಇದೇ ದ್ವೇಷದ ರಾಜಕಾರಣ. ಇದನ್ನು ಮಾಡಬಾರದು. ಇದನ್ನು ಹುಟ್ಟುಹಾಕಿದ್ದು ಆರ್.ಎಸ್.ಎಸ್ ನವರು ಎಂದದ್ದಕ್ಕೆ ಗಲಾಟೆ ನೀವು ಮಾಡಿದಿರಿ ಎಂದ ಸಿದ್ದರಾಮಯ್ಯ ಅವರು,
ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಅಂಕಿ ಅಂಶಗಳನ್ನು ಇಟ್ಟು ಸ್ಪಷ್ಟಪಡಿಸಿದರು.
ಅಪರಾಧಗಳಿಲ್ಲವೇ ಇಲ್ಲ ಎಂದು ಹೇಳಲ್ಲ. ಆದರೆ ಕಡಿಮೆಯಾಗಿವೆ ಎಂದರು.
ಹಾಲಿನ ದರದ ಏರಿಕೆ ಬಗ್ಗೆ ಮಾತನಾಡಿದ ಸಿಎಂ, 600 ಕೋಟಿ ರೂ ಉಳಿಸಿ ಹೋದವರು ನೀವು ಬಿಜೆಪಿ ಯವರು. ಆದರೆ ನಾವು ಈ ವರ್ಷ 1500 ಕೋಟಿ ಕೊಟ್ಟಿದ್ದು, ಮುಂದಿನ ವರ್ಷ 1500 ಕೋಟಿ ಮೀಸಲಿಟ್ಟಿದೆ.
ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಲಾಗಿದೆ. 341 ಕೋಟಿ ರೂಪಾಯಿ ಇದ್ದದ್ದು, 1300 ಕೋಟಿ ಹೆಚ್ಚಾಗಿದೆ. ಈ ಪ್ರಗತಿಗೆ ನಮ್ಮ ಸರ್ಕಾರ ಕಾರಣ ಎಂದರು.
ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು. ನಾವು ಬಸ್ಸಿನ ದರ ಶೇ 15% ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಸಿಬ್ಬಂದಿ ವೇತನ, ಡೀಸಲ್ ಬೆಲೆ ಏರಿಕೆಯಾದ ಕಾರಣಕ್ಕೆ ನಾವು ಬಸ್ಸಿನ ದರ ಹೆಚ್ಚಳ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು