12:11 AM Sunday22 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

2025ರ ಮಾರ್ಚ್ ಅಂತ್ಯಕ್ಕೆ ಮತ್ತಷ್ಟು ಕೆಎಸ್ಸಾರ್ಟಿಸಿ ಬಸ್ ಗಳ ಖರೀದಿಗೆ ಕ್ರಮ

18/12/2024, 18:45

ಬೆಳಗಾವಿಸುವರ್ಣಸೌಧ (reporterkarnataka.com): ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್ ಗಳನ್ನು ಖರೀದಿಸಿದ್ದು,ಬರುವ ಮಾರ್ಚ್ ಅಂತ್ಯದೊಳಗೆ ಮತ್ತಷ್ಟು ಬಸ್ ಗಳನ್ನು ಖರೀದಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಅವರು ಹೇಳಿದರು.
ಈಗಾಗಲೇ‌ ನಾಲ್ಕೂ ಸಾರಿಗೆ ನಿಗಮಗಳಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವರು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಎಸ್. ವಿ. ಸಂಕನೂರ ಅವರ ಕೇಳಿದ ಪ್ರಶ್ನೆಗೆ ಸಾರಿಗೆ ಮತ್ತು ಮುಜರಾಯಿ ಸಚಿವರ ಪರವಾಗಿ ಉತ್ತರಿಸಿದರು.
ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು
ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು