2:03 AM Sunday20 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿ ಬಸ್- ಬೈಕ್ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು; ಇನ್ನೊಬ್ಬ ಗಂಭೀರ

09/10/2022, 23:13

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ಹೊರವಲಯದಲ್ಲಿ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ನಂದೇಶ್ವರ ಗ್ರಾಮದ ಆನಂದ ಯಲ್ಲಪ್ಪ ವಟ್ಟನ್ನವರ (42) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮಂಜುನಾಥ್ ಗಂಗಪ್ಪ ನಿಡೋಣಿ (25) ಗಂಭೀರ ಗಾಯಗೊಂಡು ಅಥಣಿ ಸಮುದಾಯದ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಿಂದ ಸತ್ತಿ ಮಾರ್ಗವಾಗಿ ಅಥಣಿ ಪಟ್ಟಣಕ್ಕೆ ಬರುತ್ತಿರುವ ಬಸ್ ಹಾಗೂ ಬೈಕ್ ನಡುವೆ ಸತ್ತಿ ಗ್ರಾಮದ ಹೊರವಲಯದ ಕೆಎಂಎಫ್ ಡೈರಿ ಹತ್ತಿರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾರೆ.
ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು