9:16 PM Thursday20 - November 2025
ಬ್ರೇಕಿಂಗ್ ನ್ಯೂಸ್
Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ…

ಇತ್ತೀಚಿನ ಸುದ್ದಿ

KSRTC BUS | ಪುತ್ತೂರಿನಿಂದ ಬೆಂಗಳೂರಿಗೆ ಕೆಎಸ್ಸಾರ್ಟಿಸಿ ಹಗಲು ಬಸ್ ಸೇವೆ ಆರಂಭ

20/11/2025, 21:11

ಪುತ್ತೂರು(reporterkarnataka.com): ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು.
ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ 8 ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ ಬೆಂಗಳೂರಿಗೆ ಬಸ್ ಸಂಚಾರ ಇರಲಿಲ್ಲ. ಈ ಬಗ್ಗೆ ಸಾರ್ವಜನಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಸೂಚನೆಯಂತೆ ಇಲಾಖೆಯಿಂದ ಹೊಸ ಬಸ್ ಮಂಜೂರಾಗಿದೆ.
ಅದೇ ರೀತಿ ಪುತ್ತೂರಿನಿಂದ ಮೊಟ್ಟೆತ್ತಡ್ಕ ಮಾರ್ಗವಾಗಿ- ಪಂಜಳದಿಂದ ಪುರುಷರಕಟ್ಟೆಯಾಗಿ ಪುತ್ತೂರಿಗೆ ಸಂಪರ್ಕ ಮಾಡುವ ಹೊಸ ರೂಟನ್ನು ಶಾಸಕರು ಚಾಲನೆ ಮಾಡಿದರು. ಬಸ್ಸು ಚಾಲನೆ ನೀಡಿ ಮಾತನಾಡಿದ ಶಾಸಕರು “ಪುತ್ತೂರಿನಿಂದ ಬೆಂಗಳೂರಿಗೆ ಬೆಳಿಗ್ಗೆ ವೇಳೆ ಬಸ್ ಬಿಡಬೇಕು ಎಂಬ ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು