7:02 AM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್

15/02/2026, 13:55

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮೈಸೂರು ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ.
ಸಾರಿಗೆ ಬಸ್‌ಗಳು ಮತ್ತು ಆಟೋ ನಡುವೆ ಈ ಡಿಕ್ಕಿ ನಡೆದಿದ್ದು, ಘಟನೆಯಿಂದಾಗಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಲಿಸುತ್ತಿದ್ದ ಬಸ್‌ನ ಬ್ರೇಕ್ ದಿಢೀರ್ ಕೈಕೊಟ್ಟಿದ್ದರಿಂದ ನಿಯಂತ್ರಣ ತಪ್ಪಿದ ಬಸ್ ಮುಂದಿದ್ದ ಮತ್ತೊಂದು ನಗರ ಸಾರಿಗೆ ಬಸ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ.ಈ ವೇಳೆ ಡಿಕ್ಕಿಯ ರಭಸಕ್ಕೆ ಮುಂದಕ್ಕೆ ಚಲಿಸಿದ ಬಸ್ ತನ್ನ ಮುಂದಿದ್ದ ಆಟೋ ರಿಕ್ಷಾಕ್ಕೂ ಡಿಕ್ಕಿ ಹೊಡೆದಿದ್ದು, ಸರಣಿ ಅಪಘಾತಕ್ಕೆ ಕಾರಣವಾಯಿತು.ಅಪಘಾತದ ತೀವ್ರತೆಗೆ ಎರಡು ಸರ್ಕಾರಿ ಬಸ್‌ಗಳು ಹಾಗೂ ಒಂದು ಆಟೋ ರಿಕ್ಷಾ ಸ್ಥಳದಲ್ಲೇ ಜಖಂಗೊಂಡಿವೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲವಾದರೂ, ವಾಹನಗಳು ರಸ್ತೆಯ ಮಧ್ಯದಲ್ಲೇ ನಿಂತಿದ್ದರಿಂದ ಮೈಸೂರಿನ ನಗರ ಸಾರಿಗೆ ಬಸ್ ನಿಲ್ದಾಣದ ಸುತ್ತಮುತ್ತ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಬ್ರೇಕ್ ಫೇಲ್ ಆಗಿರುವ ಬಗ್ಗೆ ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಸಾರಿಗೆ ಬಸ್‌ಗಳ ನಿರ್ವಹಣೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು