ಇತ್ತೀಚಿನ ಸುದ್ದಿ
ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ
09/12/2025, 15:38
ರಾಯಚೂರು(repprterkarnataka.com): ಜಿಲ್ಲೆಯ ದೇವದುರ್ಗ ಬಳಿ ಕೆಎಸ್ ಆರ್‌ಟಿಸಿ(ಕಲ್ಯಾಣ ಕರ್ನಾಟಕ) ಬಸ್ ಅತಿವೇಗದಿಂದಾಗಿ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.




ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಂಚೆಸುಗೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಕೆಆರ್‌ಟಿಸಿ (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಬಸ್ಸೊಂದು ಪಲ್ಟಿಯಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ.ಈ ಘಟನೆಯಲ್ಲಿ ಬಸ್‌ನ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಘಟನೆ ಇಂದು ದೇವದುರ್ಗ ಠಾಣಾ ವ್ಯಾಪ್ತಿಯ ಅಂಚೆಸುಗೂರು ಗ್ರಾಮದಿಂದ ದೇವದುರ್ಗ ಪಟ್ಟಣಕ್ಕೆ ಹೊರಟಿದ್ದ ಕೆಕೆಆರ್‌ಟಿಸಿ ಬಸ್‌ನಲ್ಲಿ ನಡೆದಿದೆ. ಅಂಚೆಸುಗೂರು ಗ್ರಾಮದಿಂದ ಸ್ವಲ್ಪ ದೂರದಲ್ಲಿ, ಬಸ್ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರಣದಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ಪಲ್ಟಿಯಾಗಿದೆ. ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು.












