7:14 AM Saturday4 - January 2025
ಬ್ರೇಕಿಂಗ್ ನ್ಯೂಸ್
ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನ ವಿನಿಯೋಗ: ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ… ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ದರ ಹೆಚ್ಚಳ: ಸಚಿವ ಸಂಪುಟ ಅನುಮೋದನೆ ಮಂಗಳೂರು ಸಹಿತ ರಾಜ್ಯದ 6 ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆ: ಸಚಿವ ಬೈರತಿ… ಕ್ರೆಡಲ್ ನಿಂದ 40.53 ಕೋಟಿ ಲಾಭಾಂಶ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಸ್ತಾಂತರ ಬೆಂಗಳೂರು: ಬೈಕ್ ಶೋ ರೂಂನಲ್ಲಿ ಅಗ್ನಿ ಅನಾಹುತ: ಸುಟ್ಟು ಕರಕಲಾದ 60ಕ್ಕೂ ಹೆಚ್ಚು… ಮುಂದಿನ ವರ್ಷ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ… ಎಚ್.ಡಿ.ಕೋಟೆ ತಾಲೂಕು ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ: ಪರಿಶೀಲನೆ ಸೋಲಾರ್ ಅಳವಡಿಸಿದರೆ ಕೇಂದ್ರದಿಂದ ಸಬ್ಸಿಡಿ: ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್…

ಇತ್ತೀಚಿನ ಸುದ್ದಿ

ರಾಜ್ಯದ 4 ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ದರ ಹೆಚ್ಚಳ: ಸಚಿವ ಸಂಪುಟ ಅನುಮೋದನೆ

02/01/2025, 23:21

ಬೆಂಗಳೂರು(reporterkarnataka.com):ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ. 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ದರವು ಜನವರಿ 5ರಿಂದ ಜಾರಿಗೆ ಬರಲಿದೆ.
ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ಅವರು ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು.
ಪ್ರತಿ ಲೀಟರ್ ಡೀಸೆಲ್ ಗೆ 10-1-2015ರಲ್ಲಿ ಬಿಎಂಟಿಸಿ ಗೆ ಹತ್ತು ವರ್ಷಗಳ ಹಿಂದೆ ದರ ಪರಿಷ್ಕರಣೆ ಆಗಿತ್ತು. ಅಂದು ರೂ. 60.98 ಪೈಸೆ ಇತ್ತು. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಂದಿನ ಡೀಸೆಲ್ ವೆಚ್ಚ 9 ಕೋಟಿ 16ಲಕ್ಷ ಇದ್ದು ಈಗ ಪ್ರಸ್ತುತ 13.21ಕೋಟಿ ಹೆಚ್ಚಳ ಆಗಿದೆ.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಂದ ಸಿಬ್ಬಂದಿ ವೆಚ್ಚ 12.85 ಕೋಟಿ ಇದ್ದದ್ದು ಪ್ರಸ್ತುತ 18.36 ಕೋಟಿ ಆಗಿದೆ ಪ್ರತಿ ದಿನ 9.56 ಕೋಟಿ ಹೆಚ್ಚುವರಿ ಹೊರೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಆಗಿದೆ.
ಎಲ್ಲಾ ಕಾರ್ಪೋರೇಷನ್ ಗಳು, ನಗರ ಬಸ್ಸುಗಳು, ಐಷಾರಾಮಿ ಬಸ್ಸುಗಳು ಸೇರಿದಂತೆ ಎಲ್ಲರಿಗೂ ಶೇ. 15% ಪರಿಷ್ಕರಿಸಲಾಗಿದೆ. ಇದರಿಂದ ಪ್ರತಿ ತಿಂಗಳು 74.85 ಕೋಟಿಗಳಷ್ಟು ಆದಾಯ ಹೆಚ್ಚಾಗಲಿದೆ. ಶಕ್ತಿ ಯೋಜನೆಗಾಗಿ ಪ್ರಸ್ತುತ ಆರ್ಥಿಕ ವರ್ಷದಲ್ಲಿ 5015 ಕೋಟಿಗಳನ್ನು ಮೀಸಲಿರಿಸಿದೆ. ಪ್ರತಿ ತಿಂಗಳು ನಾಲ್ಕೂ ನಿಗಮಗಳಿಗೆ 417.92 ಕೋಟಿ ಗಳ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗುವುದಿಲ್ಲ. ಕರ್ನಾಟಕ ಅತ್ಯುತ್ತಮ ಆರ್ಥಿಕ ಹೊಣೆಗಾರಿಕೆಯನ್ನು ಅನುಷ್ಠಾನ ಮಾಡಿರುವ ರಾಜ್ಯ ಎಂದು ಸಚಿವರು ತಿಳಿಸಿದರು.
ಬಜೆಟ್ ಮಂಡನೆ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಲಿದ್ದಾರೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಮಾಧ್ಯಮದವರಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು