5:39 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

‘ಕೆಎಸ್ಸಾರ್ಟಿಸಿ’ ಹೆಸರು ಕೇರಳದ ಪಾಲು: 7 ವರ್ಷಗಳ ಕಾನೂನು ಸಮರದ ಬಳಿಕ ತೀರ್ಪು 

03/06/2021, 13:34

ಹೊಸದಿಲ್ಲಿ(reporterkarnataka news): ಕರ್ನಾಟಕ ಮತ್ತು ಕೇರಳ ನಡುವೆ ಕೆಎಸ್ಸಾರ್ಟಿಸಿ ಪದ ಬಳಕೆ ಸಂಬಂಧಿಸಿದಂತೆ ಕಳೆದ 7 ವರ್ಷಗಳಿಂದ ನಡೆಯುತ್ತಿರುವ ಕಾನೂನು ಸಮರಕ್ಕೆ ಒಂದು ಹಂತದಲ್ಲಿ ತೆರೆ ಬಿದ್ದಿದೆ. ಕೆಎಸ್ಸಾರ್ಟಿಸಿ ಪದ ಕೇರಳಕ್ಕೆ ಸೇರಿದ್ದು ತೀರ್ಪು ನೀಡಲಾಗಿದೆ.

ಕರ್ನಾಟಕ ಮತ್ತು ಕೇರಳ ರಸ್ತೆ ಸಾರಿಗೆ ನಿಗಮ ಎರಡನ್ನು ಕೂಡ ಕೆಎಸ್ಸಾರ್ಟಿಸಿ ಎಂದು ಕರೆಯಲಾಗುತ್ತದೆ. ಜನರು ಕರ್ನಾಟಕದ ಕೆಎಸ್ಸಾರ್ಟಿಸಿ, ಕೇರಳದ ಕೆಎಸ್ಸಾರ್ಟಿಸಿ ಎಂದು ಗುರುತಿಸುತ್ತಿದ್ದರು. ಇದೇ ವಿಷಯದಲ್ಲಿ ಉಭಯ ರಾಜ್ಯಗಳ ನಡುವೆ ಕಾನೂನು ಸಮರ 7 ವರ್ಷಗಳ ಹಿಂದೆ ಆರಂಭವಾಗಿತ್ತು. ಇದೀಗ ಕೆಎಸ್ಸಾರ್ಟಿಸಿ 

ಹೆಸರು ಕೇರಳದ ಸ್ವತ್ತು ಎಂದು ಟ್ರೇಡ್‌ ಮಾರ್ಕ್‌ ರಿಜಿಸ್ಟ್ರಿ ತೀರ್ಪು ನೀಡಿದೆ.

ಬೌದ್ಧಿಕ ಆಸ್ತಿ ಹಕ್ಕು ಕಾಯ್ದೆ ಆಧಾರದಲ್ಲಿ ಇದನ್ನು ಕೇರಳಕ್ಕೆ ಬಿಟ್ಟುಕೊಡಬೇಕೆಂದು ರಿಜಿಸ್ಟ್ರಿ ತೀರ್ಪಿತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು