7:16 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುಡಿಯೋ ನೀರಲ್ಲಿ ಬರುತ್ತಿವೆ ರಾಶಿ ರಾಶಿ ಹುಳಗಳು!: ಸ್ಪಂದಿಸದ ಹೊಣೆಗೇಡಿ ಜನಪ್ರತಿನಿಧಿಗಳು, ಭ್ರಷ್ಟ ಅಧಿಕಾರಿಗಳು

08/12/2023, 13:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.ಕಂ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚೌಡಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ, ತುಂಬಾ ದಿನಗಳಿಂಲೂ ಕುಡಿಯೋ ನೀರಿನೊಂದಿಗೆ ಹುಳಗಳು ಬರುತ್ತಿದ್ದು.


ಸಂಬಂಧಿಸಿದಂತೆ ಯಾವೊಬ್ಬ ಜನಪ್ರತಿನಿಧಿಗಳು ಹಾಗೂ ಯಾವ ಅಧಿಕಾರಿಯೂ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸ್ವಚ್ಛ ನೀರು ಪೂರೈಕೆಗೆ ಹಾಗೂ ಆರೋಗ್ಯ ಸುರಕ್ಷತೆಗೆ ಹತ್ತಾರು ಯೋಜನೆಗಳನ್ನು ಜಾರಿ ತಂದಿವೆ. ಮತ್ತು ಈ ಕುರಿತು ಭಾಷಣಗಳಲ್ಲಿ ಮಾಧ್ಯಮಗಳಲ್ಲಿ, ಸಾಕಷ್ಟು ಬೊಬ್ಬೆ ಹೊಡೆದು ಕೊಂಡು ಬಾಯಿ ಬಾಯಿ ಬಡಿದು ಕೊಳ್ಳಲಾಗುತ್ತಿದೆ. ಆದರೆ ಗ್ರಾಪಂ ಅಧಿಕಾರಿಗಳು ಹಾಗೂ ಇಲಾಖಾಧಿಕಾರಿಗಳು, ಇದಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಅನ್ನೋ ರೀತಿ ವರ್ತಿಸುತ್ತಿರುವುದು ಅವರ ಹೊಣೆಗೇಡಿತನ ಸಾಬೀತಾಗಿದೆ ಎಂದು ಪ್ರಜ್ಞಾವಂತರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು