9:32 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕುಡ್ಲದ ಪೊಣ್ಣು ರಿತುಗೆ ರೋಲ್ಸ್ ರಾಯ್ಸ್‌ ನಲ್ಲಿ ಉದ್ಯೋಗ: ಸ್ಪೀಕರ್ ಖಾದರ್ ಫುಲ್ ಖುಷ್; ಮನೆಗೆ ಭೇಟಿ

13/07/2025, 11:39

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆಯಾದ ರೋಲ್ಸ್ ರಾಯ್ಸ್‌ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಮಂಗಳೂರಿನ ಕಿರಿಯ ವಯಸ್ಸಿನ ಮೊದಲ ಯುವತಿ ರಿತು ಪರ್ಣ ಅವರ ನಗರದ ಕೆಪಿಟಿ ಬಳಿ ಇರುವ ಮನೆಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ಅವರು ಕುಟುಂಬದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.
ತುಳುನಾಡಿನ ಹೆಗ್ಗಳಿಕೆಗೆ ಪಾತ್ರಳಾದ ರಿತು ಪರ್ಣ ಅವರಿಗೆ ಅಭಿನಂದನೆ ಹಾಗೂ ಶುಭಾಶಯಗಳನ್ನು ಕೋರಿದ ಸ್ಪೀಕರ್ ಖಾದರ್ ಅವರು ರಿತುವಿನ ಹೆತ್ತವರೊಂದಿಗೆ ಮಾತುಕತೆ ನಡೆಸಿ, ಹೆಣ್ಣು ಮಗುವಿನ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡಿ ಉನ್ನತ ಹುದ್ದೆಯತ್ತ ಸಾಗುವಂತೆ ಮಾಡಿದಕ್ಕೆ ಸಂತಸ ವ್ಯಕ್ತಪಡಿಸಿದರು.
ರಿತು ಪರ್ಣ ರೋಲ್ಸ್ ರಾಯ್ಸ್‌ ಕಂಪನಿಯಲ್ಲಿ 72.3 ಲಕ್ಷ ವಾರ್ಷಿಕ ಪ್ಯಾಕೇಜ್ ಸಂಬಳ ಪಡೆಯಲಿದ್ದಾರೆ. ರಿತು ರೊಬೊಟಿಕ್ಸ್ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಅಮೆರಿಕದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.


ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್‌ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವ ಮೂಲಕ ತುಳುನಾಡಿನ ಹೆಣ್ಣು ಮಗಳೊಬ್ಬಳು ಕೆಲಸ ಗಿಟ್ಟಿಸಿಕೊಳ್ಳುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಈ ಮೂಲಕ ರೋಲ್ಸ್-ರಾಯ್ಸ್‌ ನಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಪ್ರಶಂಸೆಗೆ ಪಾತ್ರವಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು