9:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಮಕ್ಕಳ ಹಕ್ಕುಗಳ ಜಾಗೃತಿ ಜಾಥಾ; ಪುಟಾಣಿಗಳಿಂದ ಮಾನವ ಸರಪಳಿ

14/11/2021, 12:31

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನ 14ರಂದು ಮಕ್ಕಳ ಹಕ್ಕುಗಳ ದಿನಾಚರಣೆ ಪ್ರಯುಕ್ತ.ಶಾಲಾ ಕಾಲೇಜುಗಳ ಮಕ್ಕಳಿಂದ ನ್ಯಾಯಾಲಯ ಇಲಾಖೆ,ವಕೀಲರ ಸಂಘ ಹಾಗೂ ತಾಲೂಕು ಕಾನೂನು ಸಮಿತಿ ನೇತೃತ್ವದಲ್ಲಿ  ಜಾಗೃತಿ ಜಾಥಾಜರುಗಿತು. 

ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಹತ್ತಿರ, ಜಾಥಾದಲ್ಲಿದ್ದ ಮಕ್ಕಳು ಮಾನವ ಸರಪಳಿ ನಿರ್ಮಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜಾಗ್ರತೆ ಮೂಡಿಸುವ ಹೇಳಿಕೆಯಿರುವ ಫಲಕಗಳನ್ನ ಹಿಡಿದು ಘೋಷಣೆಗಳನ್ನು ಕೂಗಿದರು. ಹಿರಿಯ ನ್ಯಾಯಾಧೀಶರಾದ ನಾಗೇಶ ಅವರು ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಪ್ಯಾನಲ್ ವಕೀಲರಾದ ಸಿ.ವಿರುಪಾಕ್ಷಪ್ಪ, ಬಿ.ಸಿದ್ದಲಿಂಗಪ್ಪ, ಶ್ರೀರೇಣುಕ ಕಾಲೇಜ್ ವಿದ್ಯಾರ್ಥಿಗಳು ಮತ್ತು ಶಿಕ್ಷ ಕರು ಹಾಗೂ ಸರ್ಕಾರಿ ಸಂಯುಕ್ತ ಪದವಿ ಪೂರ್ವಕಾಲೇಜ್ ಮಕ್ಕಳು ಮತ್ತು ಶಿಕ್ಷಕರು, ಶ್ರೀವಿನಾಯಕ ಶಾಲಾ ಮಕ್ಕಳು ಮತ್ತು ಶಿಕ್ಷಕರು.ಪೊಲೀಸ್ ಇಲಾಖಾ ಸಿಬ್ಬಂದಿ ಹಾಗೂ ನ್ಯಾಯಾಂಗ ಇಲಾಖೆ ಸಿಬ್ಬಂದಿ ಹಾಗೂ ಕಾನೂನು ಸೇವೆಗಳ ಸಮಿತಿಯ ಸಿಬ್ಬಂದಿ,ವಿವಿದ  ಇಲಾಖೆಗಳ ಸಿಬ್ಬಂದಿಯವರು ಜಾಥದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು