6:15 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಡಾ. ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ.!?

22/11/2023, 12:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿನ ಕೆಲ ಹಾಸ್ಟೆಲ್ ಗಳಲ್ಲಿ ವಾಂತಿ ಬೇದಿ ಪ್ರಕರಣ ಕಂಡು ಬಂದಿದ್ದು, ಮಾಹಿತಿ ತೀರ‍ಾ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿನ ಕೆಲ ವಿದ್ಯಾರ್ಥಿಗಳಿಗೆ, ವಾಂತಿ ಬೇದಿ ಕಾಣಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಕಳೆದ ವಾರದಿಂದ ಈವರೆಗೆ ಐದರಿಂದ ಹತ್ತು ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಅವರನ್ನು ವಸತಿ ನಿಲಯದ ಆರೋಗ್ಯ ಸಿಬ್ಬಂದಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುದು ಚಿಕಿತ್ಸೆ ಒದಗಿಸಿದ್ದಾರೆ. ಕೆಲ ವಿದ್ಯಾರ್ಥಿಗಳ ಪೋಷಕರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದು, ಕೆಲ ಪೋಷಕರು ಅಗಮಿಸಿ ಕೆಲ ದಿನಗಳ ಮಟ್ಟಿಗೆ ತಮ್ಮ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡೋಗಿದ್ದಾರೆ. ವಸತಿ ನಿಲಯದಲ್ಲಿ ಕಾಣಿಸಿಕೊಂಡಿರುವ ವಾಂತಿ ಬೇದಿ ಪ್ರಕರಣಕ್ಕೆ, ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿಗಳು ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಕೆಲವರು ಪ್ರಥಮ ಚಿಕಿತ್ಸೆ ಪಡೆದು ವಸತಿ ನಿಲಯದಲ್ಲಿ ವಿಶ್ರಾಂತಿ ಪಡೆದಿದ್ದು. ಹಲವರು ಪೋಷಕರನ್ನು ಸಂಪರ್ಕಿಸಿ, ಅವರೊಂದಿಗೆ ತಮ್ಮೂರಿಗೆ ವಿಶ್ರ‍ಾಂತಿಗೆಂದು ತೆರಳಿದ್ದಾರೆ. ಕೂಡಲೇ ಸಂಬಂಧಿಸಿದ ಇಲಾಖಾ ಉನ್ನತಾಧಿಕಾರಿಗಳು, ವಸತಿ ನಿಲಯಕ್ಕೆ ಬೇಟಿ ನೀಡಿ ಪರಿಶೀಲನೆ ನಂತರವೇ ಸತ್ಯಾಸತ್ಯತೆ ತಿಳಿಯಲಿದೆ. ಸಂಬಂಧಿಸಿದ ಉನ್ನತಾಧಿಕಾರಿಗಳು ವಸತಿ ನಿಲಯಕ್ಕೆ ತಿಂಗಳ ಹಿಂದೆಯಷ್ಟೆ ಭೇಟಿ ನೀಡಿದ್ದಾರಂತೆ, ಆದರೆ ಅವರು ಹೀಗೆ ಬಂದು ಹಾಗೇ ಹೋದರು ಎಂಬಂತೆ ಬಂದು ಹೋಗುತ್ತಿದ್ದಾರೆ. ಈ ವರೆಗೂ ವಸತಿ ನಿಲಯಕ್ಕೆ ಭೇಟಿ ನೀಡಿರುವ ಬಗ್ಗೆ ಸಂಬಂಧಿಸಿದ ಇಲಾಖೆಯ, ಸ್ಥಳೀಯ ಅಧಿಕಾರಿ ಮಾಧ್ಯಮಗಳಿಗೆ ಯಾವುದೇ ಮಾಹತಿ ನೀಡುವುದಿಲ್ಲ ಇದು ಕೆಲ ಪತ್ರಕರ್ತರಲ್ಲಿ ಹತ್ತಾರು ಅನುಮಾನಗಳನ್ನು ಹುಟ್ಟಿಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು