5:24 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಕೆರೆಯಲ್ಲಿ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ದಾರುಣ ಸಾವು

17/10/2022, 10:11

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporter Karnataka gmail.com

ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿರುವ ಕೆರೆಯಲ್ಲಿ ಯುವಕ ನೋರ್ವ ಈಜಲು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಮೃತನು ಕೂಡ್ಲಿಗಿ ಪಟ್ಟಣದ ಹಳೇ ಸಂತೆ ಮೈದಾನ ವಾಸಿ ಸುನೀಲ್ (30) ಎಂದು ಗುರುತಿಸಲಾಗಿದೆ.

ಯುವಕನು ಸಂಜೆ ಹೊತ್ತಲ್ಲಿ ತುಂಬಿದ ಕೆರೆಯಲ್ಲಿ ಈಜಲು ತೆರಳಿದ್ದು, ಈಜಲಾಗದೇ ಸುಸ್ತಾಗಿ ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ತಕ್ಷಣವೇ ನೆರೆದವರು ಸುನೀಲನನ್ನು ಕಾಪಾಡುವ ಪ್ರಯತ್ನ ನಡೆಸಿದ್ದು ವಿಫಲವಾಗಿದೆ, ಸುನೀಲನ ಕಳೇಬರವನ್ನು ಶೀಘ್ರವೇ ಕೆರೆಯ ನೀರಿನಿಂದ ದಡಕ್ಕೆ ತಂದಿದ್ದಾರೆಂದು ತಿಳಿದುಬಂದಿದೆ,

ಮೃತ ಸುನೀಲ ಸ್ಥಳೀಯ ಕಟ್ಟಿಗೆ ಶಾಮೀಲೊಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು.ಪ್ರಕರಣ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು