1:27 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಮರ್ಪಕ ಸರಕಾರಿ ಬಸ್ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿಗಳ ಭಾರಿ ಪ್ರತಿಭಟನೆ: ಕಚೇರಿಗೆ ದಿಢೀರ್ ಮುತ್ತಿಗೆ

19/11/2022, 18:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporter Karnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಘಟಕದಿಂದ. ಗ್ರಾಮೀಣ ಭಾಗಗಳಿಗೆ ಹಾಗೂ ಬಹುತೇಕ ವಿದ್ಯಾಭ್ಯಾಸಕ್ಕಾಗಿ ತೆರಳುವ ಮಾರ್ಗಕ್ಕೆ,ಸಮಯಕ್ಕೆ ಸರಿಯಾಗಿ ಸಂಪರ್ಕ ಕಲ್ಪಿಸುವಂತೆ ವಿದ್ಯಾರ್ಥಿಗಳು ಘಟಕದ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಹೋರಾಟಗಾರರಾದ ಹೆಚ್.ವೀರಣ್ಣ ಹಾಗೂ ಮರಬನಳ್ಳಿ ಕರಿಯಪ್ಪ ನೇತೃತ್ವದಲ್ಲಿ, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಅಧಿಕಾರಿಗಳ ಘಟಕ ಅಧಿಕಾರಿಗಳ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಒತ್ತಾಯಿಸಿದ್ದಾರೆ.

ಕೂಡ್ಲಿಗಿ ಯಿಂದ ಕೊಟ್ಟೂರು ಮಾರ್ಗದ ಬಸ್ ಗಳನ್ನು ನೂರಾರು ವಿದ್ಯಾರ್ಥಿಗಳು ಅವಲಂಬಿಸಿದ್ದಾರೆ, ಕಾರಣ ಪ್ರತಿದಿನಾಲು ಬೆಳಿಗ್ಗೆ 8ರಿಂದ10 ಗಂಟೆ ಒಳಗೆ ಘಟಕದಿಂದ ಹೊರಡುವಂತೆ. ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನೆರೆದ ನೂರಾರು ವಿದ್ಯಾರ್ಥಿಗಳು ಸಾರ್ವಜನಿಕರು ಹೋರಾಟಗಾರರು , ಘಟಕದ ಅಧಿಕಾರಿಗಳಲ್ಲಿ ಕೋರಿದ್ದಾರೆ. ಕೂಡ್ಲಿಗಿ ಕೊಟ್ಟೂರು ಹರಪನಹಳ್ಳಿ ಮಾರ್ಗ ಸೇರಿದಂತೆ, ತಾಲೂಕಿನ ಗ್ರಾಮೀಣ ಭಾಗಗಳಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗೋ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಕೋರಿದರು. ಘಟಕ ವ್ಯವಸ್ಥಾಪಕರು ವಿದ್ಯಾರ್ಥಿಗಳ ಅಹವಾಲಿಗೆ ಶೀಘ್ರವೇ ಸ್ಪಂದಿಸುವ ಭರವಸೆ ನೀಡಿದರು, ತದನಂತರ ವಿದ್ಯಾರ್ಥಿಗಳು ಹೋರಾಟಗಾರರು ಘಟಕ ಅಧಿಕಾರಿ ಕಚೇರಿಯಿಂದ ಬಸ್ ನಿಲ್ದಾಣದತ್ತ ನಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು