11:42 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

23/03/2022, 09:49

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ,ಕಾನೂನು ತಿಳುವಳಿಕೆ ಕಾರ್ಯಾಗಾರ ಜರುಗಿತು. 

ನ್ಯಾಯಾಲಯ ಇಲಾಖೆ, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು.”ಗ್ರಾಹಕ ರಕ್ಷಣಾ ಕಾಯ್ದೆ ಗ್ರಾಹಕರ ಹಕ್ಕುಗಳು ಮತ್ತು ಜವಾಬ್ದಾರಿ ಗಳು”ಕುರಿತು ಪ್ಯಾನಲ್  ವಕೀಲರಾದ ಜಿ.ಎಮ್.ಮಲ್ಲಿಕಾರ್ಜುನ ಸ್ವಾಮಿ ಉಪನ್ಯಾಸ ನೀಡಿದರು.

ನಂತರ ವಕೀಲರಾದ ಕರಿಬಸವರಾಜ ಮೋಟಾರು ವಾಹನ ಕಾಯ್ದೆ, ವಕೀಲರ ಸಂಘದ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ ಜನನ ಮತ್ತು ಮರಣ ಪ್ರಮಾಣ ಪತ್ರಗಳ ಮಹತ್ವ ಕುರಿತು ಮಾತನಾಡಿದರು. ಹಿರಿಯ ವಕೀಲರಾದ ಭಾಷಾ ಸಾಹೇಬ್ ಯುವಕರು ಶಿಕ್ಷಣ ಜೊತೆಗೆ ನೈತಿಕ ಶಿಕ್ಷಣ ಹಾಗೂ ನಾಡ ಭಕ್ತಿ ದೇಶಭಕ್ತಿ ಹೊಂದುವಂತೆ ಯುವಕರಿಗೆ ಕರೆ ನೀಡಿ ಜಾಗ್ರತೆ ಮೂಡಿಸುವ ನಿಟ್ಟಿನಲ್ಲಿ ಮಾತನಾಡಿದರು.

ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಂಪಾಪತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಹೆಚ್ಚುವರಿ ವಕೀಲರಾದ ಕೆ.ಜಿ.ಶಿವಪ್ರಸಾದ್, ವಕೀಲರಾದ ಮಲ್ಲಿಕಾರ್ಜುನ ವೇದಿಕೆಯಲ್ಲಿದ್ದರು.

ಪ್ಯಾನಲ್ ವಕೀಲರಾದ ಸಿ.ವಿರುಪಾಕ್ಷಪ್ಪ ಸ್ವಾಗತ, ನಿರೂಪಣೆ ಹಾಗೂ ವಂದನಾರ್ಪಣೆ ನಿರ್ವಹಿಸಿದರು. ಕಾನೂನು ಸೇವೆಗಳ ಸಮಿತಿ ಸಿಬ್ಬಂದಿ,ನಿಲಯ ಮೇಲ್ವಿಚಾರಕ ಕುಮಾರಸ್ವಾಮಿ ಹಾಗೂ ಸಿಬ್ಬಂದಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು