3:27 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಾಹನ ಅಪಘಾತದಲ್ಲಿ ಮೃತಪಟ್ಟ ಅಪರಿಚಿತ ವ್ಯಕ್ತಿಯ ಶವ ಪತ್ತೆ; ವಿಳಾಸ ಪತ್ತೆಗೆ ಕೋರಿಕೆ

09/09/2021, 18:33

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ50 ಕರೇಕಲ್ ಬಗಡಿಯಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಂದಾಜು 45 ವರ್ಷ ಪ್ರಾಯ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಗುರುತು ಪತ್ತೆಗೆ ಸಾರ್ವಜನಿಕರಲ್ಲಿ ಕೂಡ್ಲಿಗಿ ಸಿಪಿಐ ವಸಂತ ಅಸೋದೆ ಕೋರಿದ್ದಾರೆ. 

ಮೇಲ್ನೋಟಕ್ಕೆ ಮೃತವ್ಯಕ್ತಿ ಮಾನಸಿಕ ಅಸ್ವಸ್ಥನೋ ಅಥವಾ ಭಿಕ್ಷುಕನ ತರಹ ಕಂಡು ಬಂದಿದೆ.

ಆತನು ನಡೆದುಕೊಂಡು ತೆರಳುವಾಗ ಯಾವುದೋ ವಾಹನ ಈತನಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮ  ತಲೆ ಹಾಗೂ ಕಾಲು ತೀವ್ರ ಗಾಯಗೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂಬಂದಿಸಿದಂತೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ವಿಳಾಸ ಪತ್ತೆಗಾಗಿ ಕೂಡ್ಲಿಗಿ ಸಿಪಿಐ ವಸಂತ ಅಸೋದೆಯವರು ಪ್ರಕಟಣೆ ನೀಡಿದ್ದು,ಚಹರೆ ಹಾಗೂ ವಿವರ ಗಳಿಂದ ಮೃತ ವ್ಯಕ್ತಿಯ  ವಿಳಾಸ ಅಥಾವ ಮಾಹಿತಿ ಯಾರಿಗಾದರೂ ತಿಳಿದು ಬಂದಲ್ಲಿ ಕೂಡಲೇ ಕೂಡ್ಲಿಗಿ ಪೊಲೀಸ್ ಠಾಣೆ ಅಥವಾ ಹತ್ತಿರದ ಪೊಲೀಸ್ ಠಾಣೆಯನ್ನ ಸಂಪರ್ಕಿಸಿ,ಅಗತ್ಯ ಮಾಹಿತಿ ನೀಡಿ ವಿಳಾಸ ಪತ್ತೆಗೆ ನೆರವು ನೀಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು