7:50 PM Saturday31 - January 2026
ಬ್ರೇಕಿಂಗ್ ನ್ಯೂಸ್
ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ

ಇತ್ತೀಚಿನ ಸುದ್ದಿ

ಕೂಡ್ಲಿಗಿ: ವಿಶ್ವ ಸಾಮಾಜಿಕ ನ್ಯಾಯದಿನ; ತೃತೀಯ ಲಿಂಗಿ, ಸಾರ್ವಜನಿಕರಿಗೆ ಕಾನೂನು ಅರಿವು ನೆರವು

22/02/2022, 10:09

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ನ್ಯಾಯಾಲಯದಲ್ಲಿ, ಫೆ21ರಂದು ಕೂಡ್ಲಿಗಿ ನ್ಯಾಯಾಲಯ ಇಲಾಖೆ, ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ತಾಲೂಕಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ.ವಿಶ್ವ ಸಾಮಾಜಿಕ ನ್ಯಾಯದಿನ ಆಚರಿಸಲಾಯಿತು,

ಇದರ ಪ್ರಯುಕ್ತ ತೃತೀಯ ಲಿಂಗಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಿರಿಯ ಶ್ರೇಣಿ ನ್ಯಾಯಾಧೀಶರಾದ ಕೆ.ಎ.ನಾಗೇಶರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತೃತೀಯ ಲಿಂಗಿಗಳಿಗಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು, ಎಲ್ಲರೂ ಶೈಕ್ಷಣಿಕಾಭಿವೃದ್ಧಿ ಹೊಂದಿ ಸ್ವಾವಲಂಬಿಗಳಾಗಬೇಕೆಂದು ಕರೆ ನೀಡಿದರು. ಪ್ಯಾನಲ್ ವಕೀಲರಾದ ಸಿ. ವಿರುಪಾಕ್ಷಪ್ಪ, “ವಿಶ್ವ ಸಾಮಾಜಿಕ ನ್ಯಾಯ ದಿನ” ಕುರಿತು ಉಪನ್ಯಾಸ ನೀಡಿದರು. ಕಿರಿಯ ಶ್ರೇಣಿ ನ್ಯಾಯಾಧೀಶರಾದ ಮುರುಗೇಂದ್ರ ತುಬಾಕೆ ರವರು, ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿ ಮಾತನಾಡಿದರು.ವಕೀಲರ ಸಂಘದ ಅಧ್ಯಕ್ಷ ಜಿ.ಹೊನ್ನೂರಪ್ಪ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. “ಮೈತ್ರಿ ಯೋಜನೆಯಡಿಯ ಫಲಾನುಭವಿಗಳಿಗೆ, ಕಂದಾಯ ಇಲಾಖೆಯಿಂದ ನೀಡಲ್ಪಡುವ,ಮೈತ್ರಿ ಯೋಜನೆಯ ಮಂಜೂರು ಪತ್ರ ನೀಡಲಾಯಿತು. ಸಹಾಯಕ ಸರ್ಕಾರಿ ಅಭಿಯೋಜಕರಾದ ಹೊಸವಡ್ರು ಅಣ್ಣೇಶ, ವಕೀಲರ ಸಂಘ ಕಾರ್ಯದರ್ಶಿ ಬಿ.ಸಿದ್ದಲಿಂಗಪ್ಪ, ಉಪ ತಹಶಿಲ್ದಾರರಾದ ಹಿರಿಯ ಮಹಿಳಾ ವಕೀಲರಾದ ಜಿ.ಎನ್.ಕುಮಾರಸ್ವಾಮಿ ಮತ್ತು ಅರುಂಧತಿ ನಾಗವಿ, ಸಿಡಿಪಿಓ ನಾಗನಗೌಡ ವೇದಿಕೆಯಲ್ಲಿದ್ದರು. ಹಿರಿಯ ಮಹಿಳಾ ವಕೀಲರಾದ ಕೆ.ಹೆಚ್.ಎಮ್.ಶೈಲಜಾ  ಸ್ವಾಗತಿಸಿದರು.ಪ್ಯಾನಲ್ ವಕೀಲರಾದ ಟಿ.ಮಲ್ಲಿಕಾರ್ಜುನ ನಿರೂಪಿಸಿದರು. ಜಿ.ಎಮ್.ಮಲ್ಲಿಕಾರ್ಜುನಸ್ವಾಮಿ ವಂದಿಸಿದರು. ಕಾನೂನು ಸೇವಾಸಮಿತಿಯ ಸಿಬ್ಬಂದಿ ಹಾಗೂ ನ್ಯಾಯಾಲಯ ಸಿಬ್ಬಂದಿ,ಪಟ್ಟಣ ಸೇರಿದಂತೆ ವಿವಿದೆಡೆಗಳಿಂದ ಆಗಮಿಸಿದ್ದ ತೃತೀಯಲಿಂಗಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು