5:57 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ಸರ್ವಂ ಕೃಷ್ಣಮಯ: ಮಕ್ಕಳಿಗೆ ವಾಸುದೇವನ ವೇಷ ತೊಡಿಸಿ ಸಂಭ್ರಮಿಸಿದ ಭಕ್ತ ಜನ

01/09/2021, 16:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಕೂಡ್ಲಿಗಿ ತಾಲೂಕಿನ ಬಹುತೇಕ ಕಡೆ ಕೃಷ್ಣ ದೇವನ ಪರ್ವ ಜರುಗಿದೆ.ಕೂಡ್ಲಿಗಿ ಪಟ್ಟಣದ ಶ್ರೀವೆಂಕಟೇಶ್ವರ ದೇವಸ್ಥಾನ ಮತ್ತು ಶ್ರೀಕೊತ್ತಲಾಂಜನೇಯ ದೇವಸ್ಥಾನ, ಬಂಡೇ ಬಸಾಪುರ ತಾಂಡದ ಶ್ರೀವಿಠಲದೇವರ ದೇವಸ್ಥಾನದಲ್ಲಿ, ಬೊಪ್ಪಲಾಪುರ ಗ್ರಾಮದಲ್ಲಿ ಶ್ರೀಕೃಷ್ಣ ನ ವಿಶೇಷ ಆರಾಧನೆ ಜರುಗಿತು.

ಭಕ್ತರು ಶ್ರೀಕೃಷ್ಣಲೀಲೆಗಳನ್ನು ಸಾರುವ ವೇಷಗಳನ್ನು ತಮ್ಮ ಮಕ್ಕಳಿಗೆ ತೊಡಿಸಿ ಕೃಷ್ಣನನ್ನು ಕಂಡು ನಲಿದರು. ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವನ ಆರಾಧನೆ ಭರ್ಜರಿ ನಡೆಯಿತು.

ಹಿರಿಯರು, ದೇವಸ್ಥಾನದ ಕಾರ್ಯಕರ್ತರು, ಮಹಿಳೆಯರು ಹಾಗೂ ಮಕ್ಕಳು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.
oo
ಹಲವು ಗ್ರಾಮಗಳಲ್ಲಿನ ವಿಠಲ ದೇವಸ್ಥಾನ  ಹಾಗೂ ವಿಷ್ಣು ದೇವಸ್ಥಾನಗಳಲ್ಲಿ ಶ್ರೀಕೃಷ್ಣ ದೇವರ ಭಜನೆ ಆರಾಧನೆ ವಿಶೇಷ ಪೂಜಾ ಕೈಂಕರ್ಯಗಳನ್ನು ಜರುಗಿಸಲಾಯಿತು. ಈ ಮೂಲಕ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ,ಶ್ರೀಕೃಷ್ಣ ದೇವರ ದರುಷನ ಭಾಗ್ಯ ಅಸ್ತಿಕರಿಗೆ ದೊರಕಿ ಜಗವೆಲ್ಲಾ ಕೃಷ್ಣಮಯ ಎಂಬತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು