8:16 AM Friday29 - August 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ಕುದ್ರೋಳಿ ದೇಗುಲ ಮುಂಭಾಗದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಶಾಸಕ ವೇದವ್ಯಾಸ ಕಾಮತ್ ಸೂಚನೆ 

23/07/2022, 12:40

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆ ಉನ್ನತೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು,  ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ‌ಕಾಮತ್, 75 ಲಕ್ಷ ರೂಪಾಯಿ ವೆಚ್ಚದಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತಿದ್ದು ಕಾಮಗಾರಿಗೆ ಮತ್ತಷ್ಟು ವೇಗ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲವೊಂದು ಕೆಲಸ ಬಾಕಿಯುಳಿದಿದೆ ಎಂದು ಹೇಳಿದರು. 

ಈ ರಸ್ತೆಯಲ್ಲಿದ್ದ ಹಳೆಯದಾದ ಒಳಚರಂಡಿ ಕೊಳವೆಗಳನ್ನು ಬದಲಾಯಿಸಿ ಹೊಸದಾಗಿ ಒಳಚರಂಡಿ ಜಾಲ ರಚಿಸಲಾಗಿದೆ. 24×7 ಕುಡಿಯುವ ನೀರು ಪೂರೈಸುವ ಜಲಸಿರಿ ಯೋಜನೆಯ ಹಾಗೂ ಗೈಲ್ ಗ್ಯಾಸ್ ಸಂಪರ್ಕದ ಪ್ರಮುಖ ಕೊಳವೆಗಳ ಅಳವಡಿಕೆ ಪೂರ್ಣಗೊಳಿಸಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಯುತ್ತಿದೆ. ಪಾದಾಚಾರಿ ರಸ್ತೆ ನಿರ್ಮಾಣ ಹಾಗೂ ರಸ್ತೆಯುದ್ದಕ್ಕೂ ದಾರಿದೀಪ ಅಳವಡಿಸಲು ಪ್ರತ್ಯೇಕವಾಗಿ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ರವಿ ಶಂಕರ್ ಮಿಜಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಸಾಯಿರಾಮ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ವಸಂತ್ ಜೆ ಪೂಜಾರಿ, ಅರುಣ್ ಶೇಟ್, ದಿನಕರ್ ಶೆಟ್ಟಿ, ಪ್ರವೀಣ್ ಕುದ್ರೋಳಿ, ಜನಾರ್ದನ ಕುಡ್ವ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು