1:29 AM Sunday29 - November 2026
ಬ್ರೇಕಿಂಗ್ ನ್ಯೂಸ್
ನಶಾಮುಕ್ತ ಯುವಜನತೆಯು ವಿಕಸಿತ ಭಾರತದ ಭದ್ರ ಬುನಾದಿ: ರಾಜ್ಯಪಾಲರಾದ ಡಾ. ಸುಧಾ ಯಾದವ್ ಪಶ್ಚಿಮ ಬಂಗಾಳಕ್ಕೆ ಇನ್ನು ಮುಂದೆ ಹೊಸ ಹೆಸರು!: ಮರು ನಾಮಕರಣಕ್ಕೆ ಅದೊಂದೇ ಕಾರಣ! ಮೇಕೆದಾಟು ಯೋಜನೆ : ಪರಿಸರ ಪರಿಣಾಮಗಳ ಅಧ್ಯಯನಕ್ಕೆ ಕೇಂದ್ರ ವನ್ಯಜೀವಿ ಮಂಡಳಿ ಒಪ್ಪಿಗೆ ಮೂಡಿಗೆರೆ | ಮುತ್ತಿಗೆಪುರ ಗ್ರಾಮದ ವಿಂಧನ್ ಮನೆ ಮೇಲೆ ಗುಂಡಿನ ದಾಳಿ: ಕೂದಲೆಳೆಯ… ಆಫ್ರಿಕಾದ ಕಾಂಗೋದಲ್ಲಿ 95 ಕನ್ನಡಿಗರ ಬಂಧನ: ಶಿವಮೊಗ್ಗ, ದಾವಣಗೆರೆಯ ಹಕ್ಕಿಪಿಕ್ಕಿ ಸಮುದಾಯ ಏಜೆಂಟರ… ಚಿಕ್ಕಮಗಳೂರು | ಬಸವ ಮಂಟಪ ಪುಸ್ತಕದ ವಿವಾದ: ಬಾಳೆಹೊನ್ನೂರಿನ ರಂಭಾಪುರಿ ಪೀಠ ಖಂಡನೆ ಕರ್ನಾಟಕದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ಗ್ರೀನ್ ಸಿಗ್ನಲ್: ರಾಜ್ಯ ಸರ್ಕಾರದ ಮೇಲ್ಮನವಿ‌ ವಜಾಗೊಳಿಸಿದ… ಕಾವೇರಿ ನದಿ ನೀರು ಹಂಚಿಕೆ | ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳನಾಡು 2… ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ…

ಇತ್ತೀಚಿನ ಸುದ್ದಿ

ಕುದ್ರೋಳಿ ದೇಗುಲ ಮುಂಭಾಗದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಶಾಸಕ ವೇದವ್ಯಾಸ ಕಾಮತ್ ಸೂಚನೆ 

23/07/2022, 12:40

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆ ಉನ್ನತೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು,  ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ‌ಕಾಮತ್, 75 ಲಕ್ಷ ರೂಪಾಯಿ ವೆಚ್ಚದಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತಿದ್ದು ಕಾಮಗಾರಿಗೆ ಮತ್ತಷ್ಟು ವೇಗ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲವೊಂದು ಕೆಲಸ ಬಾಕಿಯುಳಿದಿದೆ ಎಂದು ಹೇಳಿದರು. 

ಈ ರಸ್ತೆಯಲ್ಲಿದ್ದ ಹಳೆಯದಾದ ಒಳಚರಂಡಿ ಕೊಳವೆಗಳನ್ನು ಬದಲಾಯಿಸಿ ಹೊಸದಾಗಿ ಒಳಚರಂಡಿ ಜಾಲ ರಚಿಸಲಾಗಿದೆ. 24×7 ಕುಡಿಯುವ ನೀರು ಪೂರೈಸುವ ಜಲಸಿರಿ ಯೋಜನೆಯ ಹಾಗೂ ಗೈಲ್ ಗ್ಯಾಸ್ ಸಂಪರ್ಕದ ಪ್ರಮುಖ ಕೊಳವೆಗಳ ಅಳವಡಿಕೆ ಪೂರ್ಣಗೊಳಿಸಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಯುತ್ತಿದೆ. ಪಾದಾಚಾರಿ ರಸ್ತೆ ನಿರ್ಮಾಣ ಹಾಗೂ ರಸ್ತೆಯುದ್ದಕ್ಕೂ ದಾರಿದೀಪ ಅಳವಡಿಸಲು ಪ್ರತ್ಯೇಕವಾಗಿ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ರವಿ ಶಂಕರ್ ಮಿಜಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಸಾಯಿರಾಮ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ವಸಂತ್ ಜೆ ಪೂಜಾರಿ, ಅರುಣ್ ಶೇಟ್, ದಿನಕರ್ ಶೆಟ್ಟಿ, ಪ್ರವೀಣ್ ಕುದ್ರೋಳಿ, ಜನಾರ್ದನ ಕುಡ್ವ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು