7:44 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕುದ್ರೋಳಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ

21/02/2026, 12:07

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಲಾಲ್‌ಭಾಗ್ ಶಾಖೆಯ ಹನ್ನೊಂದನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಹಾಗೂ ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ö (ರಿ) ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಫೆ. 22ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 12.30ರ ವರೆಗೆ ಕುದ್ರೋಳಿ ಯುವಕ ಸಂಘ (ರಿ), ಕುದ್ರೋಳಿ, ಮಂಗಳೂರು ಇಲ್ಲಿ ಆಯೋಜಿಸಲಾಗಿದೆ.
ಈ ವೈದ್ಯಕೀಯ ಶಿಬಿರದಲ್ಲಿ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಪೌಂಡೇಶನ್, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಇ.ಸಿ.ಜಿ, ಕಿವಿ, ಮೂಗು, ಗಂಟಲು ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಚರ್ಮರೋಗ ತಪಾಸಣೆ ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು