1:57 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ಸೌಹಾರ್ದ ಭೇಟಿ

21/10/2023, 20:37

ಮಂಗಳೂರು(reporterkarnataka.com):ಜಗತ್ಪ್ರಸಿದ್ಧ ಮಂಗಳೂರು ದಸರಾ ನಡೆಯುವ ಸೌಹಾರ್ದ ತಾಣ ಕುದ್ರೋಳಿ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ವೇದಿಕೆಯ ಇತರ ಸದಸ್ಯರೊಂದಿಗೆ ಸೌಹಾರ್ದ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪೂಜೆ ಪುರಸ್ಕಾರ ಹಾಗೂ ಕಾರ್ಯಕ್ರಮಗಳನ್ನು ವೀಕ್ಷಿಸಿದರು.

ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶ ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಹಸ್ತದಿಂದ ಪ್ರತಿಷ್ಠಾಪನೆಗೊಂಡ ಶ್ರೀ ಗೋಕರ್ಣಾನಾಥ ಕ್ಷೇತ್ರವು ಸರ್ವ ಧರ್ಮದ ಜನತೆಯ ಪ್ರೀತಿ ವಿಶ್ವಾಸಗಳಿಸುವ ಮೂಲಕ ಸೌಹಾರ್ದತೆಯ ತಾಣವಾಗಿ ಜಗತ್ಪಸಿದ್ದಗೊಂಡಿದೆ. ಮಾತ್ರವಲ್ಲದೆ ನಾಡ ಹಬ್ಬವಾದ ದಸರಾದ ಇಲ್ಲಿನ ವೈಭವವು ಎಲ್ಲರ ಕಣ್ಮಣ ಸೆಳೆಯುತ್ತಿದೆ. ಮಂಗಳೂರು ದಸರಾ ಇಂದು ಜಾಗತಿಕ ಮನ್ನಣೆ ಪಡೆದಿದ್ದು, ಇಲ್ಲಿನ ದಸರಾ ಸಂಭ್ರಮದಲ್ಲಿ ದೇಶ ವಿದೇಶಗಳಿಂದ ಜನತೆ ಭಾಗವಹಿಸುವ ಮೂಲಕ ಕೂಡಿ ಬಾಳುವ ಸಂಸ್ಕ್ರತಿಯ ಪ್ರತೀಕವಾಗಿದೆ ಎಂದು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ಈ ಸಂದರ್ಭದಲ್ಲಿ ನುಡಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿ ಸದಸ್ಯರಾದ ರವಿಶಂಕರ್ ಮಿಜಾರ್,ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪ್ರಮುಖರಾದ ಸುನಿಲ್ ಕುಮಾರ್ ಬಜಾಲ್, ಮಂಜುಳಾ ನಾಯಕ್,ಅಶ್ರಫ್ ಕೆ, ಡೋಲ್ಫಿ ಡಿಸೋಜ, ಮಹೇಶ್ ನಾಯಕ್, ಮರ್ಲಿನ್ ರೇಗೋ, ಫ್ಲೇವಿ ಕ್ರಾಸ್ತಾ,ಡಯಾನ ಡಿಸೋಜ,ಫ್ಲೋರಿನ್ ಡಿಸೋಜ, ಸಂಜನಾ ಛಲವಾದಿ,ಸಮರ್ಥ್ ಭಟ್,ಸಿಲ್ವಿಯಾ ಸಿಕ್ವೇರಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು