ಇತ್ತೀಚಿನ ಸುದ್ದಿ
ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ ಸಂಪನ್ನ; ಮಂಗಳೂರು ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರು ನಾಮಕರಣಕ್ಕೆ ಹಕ್ಕೊತ್ತಾಯ
17/07/2022, 21:13
ಮಂಗಳೂರು(reporterkarnataka.com): ಬ್ರಹ್ಮಶ್ರೀ ನಾರಾಯಣ ಗುರು ಕುರಿತು ಪಠ್ಯದಲ್ಲಿ ಮರು ಸೇರ್ಪಡೆ ಹಾಗೂ ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ವಿಶೇಷ ಗುರುಪೂಜೆ ಸಲ್ಲಿಸಲಾಯಿತು.
ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್ಯ ಪುನರ್ ಸೇರ್ಪಡೆ ಮಾಡಲು ಆದೇಶಿಸಿದ ಹಿನ್ನೆಲೆ ಹಾಗೂ ಸಮಾಜದ ಪ್ರಮುಖ ಬೇಡಿಕೆಗಳಾದ ಬ್ರಹ್ಮಶ್ರೀ ನಾರಾಯಣಗುರು ನಿಗಮ (ಬಿಲ್ಲವ ನಿಗಮ) ಸ್ಥಾಪನೆ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡಬೇಕೆಂದು ಒತ್ತಾಯಿಸಿ ಹಾಗೂ ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ ಸಲ್ಲಿಸಲಾಯಿತು.
ವಿಶೇಷವಾಗಿ ನಾರಾಯಣ ಗುರುಗಳ ಹೆಸರನ್ನು ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಇಡುವಂತಗಲಿ
ಎಂದು ಅನುಯಾಯಿಗಳು ಒಕ್ಕೊರಲಿನಿಂದ ಪ್ರಾರ್ಥನೆ ಸಲ್ಲಿಸಿದರು.
ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಬ್ರಹ್ಮಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಕ್ಷೇತ್ರಾಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆರ್., ಬೆಳ್ತಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಕೊಲ್ಯ ಬಿಲ್ಲವ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲ ಕೊಲ್ಯ, ಅಖಿಲ ಭಾರತ ಬಿಲ್ಲವ ಮಹಾಮಂಡಲ ಉಪಾಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಪ್ರಮುಖರಾದ ಪದ್ಮನಾಭ ಮಾಣಿಂಜ, ಶೈಲೇಂದ್ರ ಸುವರ್ಣ, ಈಶ್ವರ್ ತಣ್ಣೀರ್‌ತೋಟ, ರಘುನಾಥ ಮಾಬಿಯಾನ್, ಜಗದೀಶ್ ಕೊಯ್ಲ, ಪುರುಷೋತ್ತಮ ಕುಪ್ಪೆಪದವು, ಗೆಜ್ಜೆಗಿರಿ ನಂದನ ಬಿತ್ತ್‌ಲ್ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ವಕ್ತಾರ ರಾಜೇಂದ್ರ ಚಿಲಿಂಬಿ, ಗೆಜ್ಜೆಗಿರಿ ಮೇಳದ ಸಂಚಾಲಕ ನವೀನ್ ಸುವರ್ಣ, ಯುವವಾಹಿನಿ ಮಹಿಳಾ ಘಟಕ ಅಧ್ಯಕ್ಷೆ ಸುನೀತಾ, ರೇಖಾ, ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ಹರೀಶ್ ಕೆ.ಪೂಜಾರಿ, ವಿಷ್ಣುದಾಸ್, ಸುನೀಲ್, ರೋಹಿದಾಸ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾರಾಯಣ ಗುರುಗಳ ಅನುಯಾಯಿಗಳು ಮೊದಲಾದವರು ಉಪಸ್ಥಿತರಿದ್ದರು.