7:32 PM Sunday17 - August 2025
ಬ್ರೇಕಿಂಗ್ ನ್ಯೂಸ್
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:…

ಇತ್ತೀಚಿನ ಸುದ್ದಿ

Kudroli Temple | ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ: ಬಲಿ ಉತ್ಸವ, ಶಯನೋತ್ಸವ

21/02/2025, 22:06

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು.
ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜ ಪೂಜೆ, ಧ್ವಜಾರೋಹಣ, ತೈಲಾಭಿಷೇಕ, ಮಹಾಪೂಜೆ, ರಾತ್ರಿ ಭಜನಾ ಕಾರ್ಯಕ್ರಮ, ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ ನೆರವೇರಿತು.

ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಉಪಾಧ್ಯಕ್ಷೆ ಊರ್ಮಿಳಾರಮೇಶ್, ಟ್ರಸ್ಟಿಗಳಾದ ರವಿಶಂಕರ್ ಮಿಜಾರ್, ಜಗದೀಪ್ ಡಿ. ಸುವರ್ಣ, ಎಂ.ಶೇಖರ್ ಪೂಜಾರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ.ಸುವರ್ಣ, ಸದಸ್ಯರಾದ ಕೃತಿನ್ ಅಮೀನ್, ವೇದಕುಮಾರ್, ಎನ್ ಹರೀಶ್ಚಂದ್ರ, ಎಚ್.ಎಸ್ ಜೈರಾಜ್, ಲೀಲಾಕ್ಷ ಕರ್ಕೇರ, ಚಂದನ್‌ದಾಸ್, ಗೌರವಿ ಪಿ.ಕೆ., ಕಿಶೋರ್ ದಂಡೇಕೇರಿ, ಲತೀಶ್ ಸುವರ್ಣ, ಬಿ.ವಾಸುದೇವ ಕೋಟ್ಯಾನ್ ಮೊದಲಾದವರಿದ್ದರು.
*ಮಹಾಶಿವರಾತ್ರಿ:*
26ರಂದು ಮಹಾಶಿವರಾತ್ರಿ ಪ್ರಯುಕ್ತ ಕ್ಷೇತ್ರದಲ್ಲಿ ಬೆಳಗ್ಗೆ 9.30ಕ್ಕೆ ಉಮಾಮಹೇಶ್ವರ ಹೋಮ, 11ಕ್ಕೆ ಮಹಾರುದ್ರಾಭಿಷೇಕ, ಶತ ಸೀಯಾಳಾಭಿಷೇಕ, 12.15ಕ್ಕೆ ಮಹಾಪೂಜೆ, ರಾತ್ರಿ 8ಕ್ಕೆ ಸೇವಾ ರಥೋತ್ಸವ, 10ಕ್ಕೆ ವಿಷ್ಣುಬಲಿ ಉತ್ಸವ ಮತ್ತು ರಥೋತ್ಸವ, ರಾತ್ರಿ 1ಗಂಟೆಗೆ ಶಿವಬಲಿ, ಮಹಾಶಿವರಾತ್ರಿ ಜಾಗರಣೆ ಬಲಿ, ಕಟ್ಟೆಪೂಜೆ, ರಥೋತ್ಸವ, ಕೆರೆದೀಪ, ಮಂಟಪ ಪೂಜೆ ನೆರವೇರಲಿದೆ. 27ರಮದು ಬೆಳಗ್ಗೆ 10ಕ್ಕೆ ತತ್ವ ಹೋಮ, 12.15ಕ್ಕೆ ಪಂಚಾಮೃತಾಭಿಷೇಕ, ಮಹಾಪೂಜೆ, ಮಧ್ಯಾಹ್ನ 1ಕ್ಕೆ ಮಹಾ ಅನ್ನಸಂತರ್ಪಣೆ, ರಾತ್ರಿ 2ರಿಂದ ಭೂತ ಬಲಿ, ಬಲಿಪೂಜೆ ಅವಭೃತ ಸ್ನಾನ (ಓಕುಳಿ), 28ರಂದು ಮಧ್ಯಾಹ್ನ 11ಕ್ಕೆ ಧ್ವಜ ಅವರೋಹಣ, ರಾತ್ರಿ 7.30ಕ್ಕೆ ಗುರುಪೂಜೆ ನೆರವೇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು