12:20 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕುಡುಕ ಚಾಲಕನಿಗೆ ‘ವಿಶಿಷ್ಟ ಶಿಕ್ಷೆ’: ಕುಡಿತದ ಕೇಡಿನ ಬಗ್ಗೆ ರಸ್ತೆಯಲ್ಲಿ ಕರಪತ್ರ ಹಂಚಲು ಮದ್ರಾಸ್ ಹೈಕೋರ್ಟ್‌ ಅದೇಶ

14/09/2022, 14:04

ಚೆನ್ನೈ(reporterkarnataka.com): ಮದ್ಯಪಾನ‌ ಮಾಡಿ ವಾಹನ ಚಲಾಯಿಸಿ 3 ಮಂದಿ ಪಾದಚಾರಿಗಳಿಗೆ ಗಾಯಗೊಳಿಸಿದ ಚಾಲಕನಿಗೆ ಮದ್ರಾಸ್ ಹೈಕೋರ್ಟ್ ವಿಶಿಷ್ಟ ಶಿಕ್ಷೆ ಪ್ರಕಟಿಸಿದೆ.

ನಗರದ ಜನನಿಬಿಡ ಜಂಕ್ಷನ್‌ನಲ್ಲಿ 2 ವಾರಗಳ ಕಾಲ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಮೂವರು ಪಾದಚಾರಿಗಳನ್ನು ಗಾಯಗೊಳಿಸಿದ ಆರೋಪದ ಮೇಲೆ ಬಂಧಿತನಾಗಿದ್ದ ಯುವಕನಿಗೆ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಮೂರ್ತಿ ಎ ಡಿ ಜಗದೀಶ್ ಚಂದ್ರ ಅವರು ಈ ನಿರ್ದೇಶನ ನೀಡಿದ್ದಾರೆ.

25,000 ರೂ. ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಮತ್ತಿತರ ಷರತ್ತಿನೊಂದಿಗೆ ನ್ಯಾಯಾಲಯವು ಜಾಮೀನು ನೀಡಿದ್ದು, ಅರ್ಜಿದಾರರು ಎರಡು ವಾರಗಳ ಕಾಲ ಪ್ರತಿದಿನ ಅಡ್ಯಾರ್ ಪೊಲೀಸ್ ಠಾಣೆಗೆ ಹಾಜರಾಗಬೇಕು ಮತ್ತು ಬೆಳಿಗ್ಗೆ 9-10 ಮತ್ತು ಸಂಜೆ 5-7 ರವರೆಗೆ ಕರಪತ್ರಗಳನ್ನು ಹಂಚಬೇಕು. ಅಲ್ಲದೇ ಅಗತ್ಯವಿರುವಾಗ ಪೊಲೀಸರ ಮುಂದೆ ವರದಿ ಮಾಡಬೇಕು ಎಂದು ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು