ಇತ್ತೀಚಿನ ಸುದ್ದಿ
ಕುಡುಕ ಪತಿಯಿಂದ ಪತ್ನಿಯ ಬರ್ಬರ ಹತ್ಯೆ: ಮಕ್ಕಳ ಕಣ್ಣೆದುರೇ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ ಪಾಪಿ
23/05/2024, 17:49
ಸಂತೋಷ್ ಹನಮಂತ ಹೊಸಟ್ಟಿ ಬೆಳಗಾವಿ
info.reporterkarnataka@gmail.com
ಕುಡಿತದ ಅಮಲಿನಲ್ಲಿದ್ದ ಕುಡುಕ ಪತಿಯೊಬ್ಬ ತನ್ನ ಪತ್ನಿಯನ್ನು ಮಕ್ಕಳೆದುರೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಕಂಠಪೂರ್ತಿ ಕುಡಿದು ಬಂದಿದ್ದ ಯಲ್ಲಪ್ಪ ಎಂಬಾತ ತನ್ನ ಪತ್ನಿ
ಫಕೀರವ್ವ ಕಾಕಿ (36) ಎಂಬಾಕೆಯನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಕಂಠಪೂರ್ತಿ ಕುಡಿದು ಬಂದಿದ್ದ ಯಲ್ಲಪ್ಪ ತನ್ನ ಪತ್ನಿ ಮಲಗಿರುವುದನ್ನು ಕಂಡು ಸಲಾಕೆಯಿಂದ ಹೊಡೆದು ಸಾಯಿಸಿದ್ದಾನೆ. ಮಕ್ಕಳ ಎದುರಲ್ಲೇ ಪತ್ನಿಯನ್ನು ಬರ್ಬರವಾಗಿ ಕೊಲೆಗೈದು ಬಳಿಕ ಪರಾರಿಯಾಗಿದ್ದಾನೆ. ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.