10:13 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್: ಮುಖ್ಯಮಂತ್ರಿ ಸಿದ್ದರಾಮಯ್ಯ ಲಾಂಛನ ಅನಾವರಣ

12/12/2023, 17:54

ಬೆಳಗಾವಿ(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ )ಜನವರಿ 5, 6 ಮತ್ತು 7ರಂದು 3 ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು.


ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಜನವರಿ 5ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಯಿತು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 35ನೇ ರಾಜ್ಯ ಸಮ್ಮೇಳನವನ್ನು ಸಂಘಟಿಸಲಾಗಿದ್ದು, ಈಗ ರಾಜ್ಯ ಮಟ್ಟದ ಕ್ರಿಕೇಟ್ ಕ್ರೀಡಾಕೂಟವನ್ನ ಸಂಘಟಿಸಲಾಗುತ್ತಿದೆ ಎಂಬುವುದನ್ನು ಅವರ ಗಮನಕ್ಕೆ ತರಲಾಯಿತು.

ಲಾಂಛನ ಅನಾವರಣ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ , ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಉಪಾಧ್ಯಕ್ಷ ಭಾಸ್ಕರ್ ರೈ. ಕೆ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಪದಾಧಿಕಾರಿಗಳಾದ, ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ್ ಜಾರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು