1:53 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

25/08/2026, 10:01

ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಸರ್ಪ ದೋಷ ನಿವಾರಣೆಗೆ ಹಾಗೂ ನಾಗಾರಾಧನೆಗೆ ವಿಶ್ವವಿಖ್ಯಾತವಾದ ಅತ್ಯಂತ ಪವಿತ್ರ ಪುಣ್ಯಕ್ಷೇತ್ರವಾಗಿದೆ. ಈ ಶ್ರೀಕ್ಷೇತ್ರಕ್ಕೆ ಅಪಾರ ಭಕ್ತರು ಭೇಟಿ ನೀಡಿ ಹರಕೆ ತೀರಿಸ್ತಾರೆ. ಇದೀಗ ದೇಗುಲದ ಆಡಳಿತ ಮಂಡಳಿಯವರು ಮಹತ್ವದ ಪ್ರಕಟಣೆ ಹೊರಡಿಸಿದ್ದಾರೆ. ಈ 4 ದಿನ ಸರ್ಪ ಸಂಸ್ಕಾರ ಸೇವೆ ಇರೋದಿಲ್ಲ ಎಂದು ತಿಳಿಸಿದೆ.

*ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರ ಗಮನಕ್ಕೆ*
ಪ್ರಸಿದ್ದ ನಾಗಾರಾಧನೆಯ ತಾಣ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಲವು ಭಾಗಗಳಿಂದ ಭಕ್ತರು ಆಗಮಿಸ್ತಾರೆ. ಸರ್ಪಸಂಸ್ಕಾರ ಸೇವೆಗೆಂದು ಆಗಮಿಸುವ ಜನರಿಗೆ ದೇವಸ್ಥಾನದ ಆಡಳಿತ ಮಂಡಳಿ ಮಹತ್ವದ ಅಪ್ಡೇಟ್ ನೀಡಿದೆ. ಸೆಪ್ಟೆಂಬರ್ ತಿಂಗಳ ಈ 4 ದಿನಗಳಲ್ಲಿ ಶ್ರೀಕ್ಷೇತ್ರದಲ್ಲಿ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ. ಯಾವ ದಿನಗಳು? ಕಾರಣ ಏನು ಅಂತ ತಿಳಿದುಕೊಳ್ಳಿ.

*ಸರ್ಪಸಂಸ್ಕಾರ ಸೇವೆ ಇರುವುದಿಲ್ಲ*
ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ, ದಶಮಿ, ಏಕಾದಶಿ ಪ್ರಯುಕ್ತ ಸೆಪ್ಟೆಂಬರ್​ 3, 4, 6, 7 ರಂದು ಸರ್ಪಸಂಸ್ಕಾರ ಸೇವೆ ಇರುವುದಿಲ್ಲ. ಸೆಪ್ಟೆಂಬರ್​ 4 ರಂದು ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಹಾಗೂ ಸೆ.7 ರಂದು ಏಕಾದಶಿ ದಿನದಂದು ಆಶ್ಲೇಷ ಬಲಿ, ನಾಗ ಪ್ರತಿಷ್ಠೆ, ಮಹಾಭಿಷೇಕಗಳು ಸಹ ನೆರವೇರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು