4:11 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ ದೈವದ ದರುಶನ

26/03/2024, 23:08

ಸುಬ್ರಹ್ಮಣ್ಯ(reporterkarnataka.com): ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಹೊಸಳಿಗಮ್ಮ ದೈವದ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ, ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ. ಈ ಹಿಂದೆ ಕೂಡ ದೇವರು ನಮ್ಮನ್ನು ಕೈ ಬಿಟ್ಟಿಲ್ಲ. ಒಳ್ಳೆಯದನ್ನೇ ಮಾಡಿದ್ದಾರೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದರು.
ನಕ್ಸಲರು ಶಂಕೆ ಇರುವಂತ ಕೂಜಿಮಲೆ ಹಾಗೂ ಐನೆಕ್ಕಿದು ಗ್ರಾಮಗಳ ಮನೆಗಳಿಗೆ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಈ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಹಾಗೆ ಕೋವಿ ಪರವಾನಿಗೆ ಇರ್ತಕ್ಕಂತವರು ಡಿಪೋಸಿಟ್ ಮಾಡ ಬೇಕೋ ಬೇಡವ ಎನ್ನುವ ಬಗ್ಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಲ್ಲಿ ಚರ್ಚಿಸುತ್ತೇನೆ ಎಂದು ಹೇಳಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ, ಕಡಬ ಬ್ಲಾಕ್ ಸುಧೀರ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರುಗಳಾದ ಭರತ್ ಮುಂಡೋಡಿ, ಧನಂಜಯ ಅರ್ಥಂಗಾಯ, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಅಶೋಕ ನಿಕ್ರಾಜ, ಪಿ.ಸಿ. ವರ್ಗೀಸ್, ಮಾಧವ ಮಾನಾಡು, ಕೃಷ್ಣಪ್ಪ, ಪ್ರದೀಪ್ ಕಳಿಗೆ, ದಿನೇಶ್ ಮಡ್ತಿಲ್, ಹರೀಶ ಹಿಂಜಾಡಿ, ರಾಜೀವ್ ರೈ, ವಿಜಯಕುಮಾರ ಸೊರಕೆ, ವಿಮಲ ರಂಗಯ್ಯ, ಶಿವರಾಮ ರೈ, ಕೃಷ್ಣಮೂರ್ತಿ ಭಟ್ ಸುರೇಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು