4:13 AM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸಚಿವ ಅಂಗಾರ ತುಲಾಭಾರ ಸೇವೆ: ಹೊಸಳಿಗಮ್ಮ ಗುಡಿಗೂ ಭೇಟಿ

09/04/2023, 20:09

ಸುಬ್ರಹ್ಮಣ್ಯ(reporterkarnataka.com):ಬಂದರು ಹಾಗೂ ಮೀನುಗಾರಿಕೆ ಸಚಿವ ಅಂಗಾರ ಅವರು ಭಾನುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ತುಲಾಭಾರ ಸೇವೆ ನೀಡಿದರು. ಸಚಿವರು ಈ ಸಂದರ್ಭದಲ್ಲಿ ಹೊಸಳಿಗಮ್ಮನ ಗುಡಿಗೂ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಬ್ರಹ್ಮಣ್ಯ ದೇವಳದ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಮನೋಜ್ ಎಸ್, ಸುಬ್ರಹ್ಮಣ್ಯ ಬಿಜೆಪಿ ಮುಖಂಡ ಶ್ರೀಕುಮಾರ್, ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ಸೀಮಂತ ಜೋಳದಪ್ಪಗೆ, ವ್ಯವಸ್ಥಾಪನಾ ಸಮಿತಿ ಸದಸ್ಯ ಶೋಭಾ ಗಿರಿಧರ್ ಉಪಸ್ಥಿತರಿದ್ದರು.
ನಂತರ ಮಾಧ್ಯಮದ ಜತೆ ಮಾತನಾಡಿದ ಸಚಿವರು,
ಸುಳ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಆಕಾಂಕ್ಷಿಗಳು ಸಾಕಷ್ಟು ಮಂದಿ ಇದ್ದಾರೆ.
ಆದರೆ, ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಲಿದೆ. ಇದಕ್ಕೆ ನಾವೆಲ್ಲ ಬದ್ಧರಾಗಿರಬೇಕು ಎಂದರು.
ರಾಜ್ಯದಲ್ಲಿ ಈ ಬಾರಿ 135ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಈಗಾಗಲೇ ಪ್ರಚಾರ ಕಾರ್ಯಗಳು ನಡೆದಿವೆ. ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಿದ್ಧಪಡಿಸಿ ಹೈಕಮಾಂಡ್ ಗೆ ಕಳುಹಿಸಲಾಗಿದೆ. ಆದರೆ, ಅಭ್ಯರ್ಥಿ ಆಯ್ಕೆಯಲ್ಲಿ ಇಡೀ ರಾಜ್ಯದಲ್ಲಿ ಯಾವುದೇ ಗೊಂದಲಗಳು ಇಲ್ಲ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು