9:38 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ: ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಕಂದಮ್ಮಗಳಿಗೆ ಊರವರ ಕಣ್ಣೀರಿನ ವಿದಾಯ

03/08/2022, 19:18

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ಇಲ್ಲಿನ ಕುಮಾರಧಾರ ಬಳಿಯ ಪರ್ವತಮುಖೀಯಲ್ಲಿ ಮನೆ ಮೇಲೆ ಗುಡ್ಡ ಕುಸಿತದಿಂದ ಸಾವನ್ನಪ್ಪಿದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಇಡೀ ಸುಬ್ರಹ್ಮಣ್ಯದ ಜನತೆ ಕಣ್ಣೀರ ವಿದಾಯ ಹೇಳಿದರು.

ಸೋಮವಾರ ರಾತ್ರಿ ಸುಮಾರು 8.30ರ ವೇಳೆಗೆ ಭಾರೀ ಮಳೆಯಿಂದಾಗಿ ಪರ್ವತಮುಖಿ ಬಳಿ ಕುಸುಮಾಧರ ಎಂಬವರ ಮನೆ ಮೇಲೆ ಗುಡ್ಡ ಕುಸಿದು ಬಿದ್ದಿತ್ತು. ಮನೆಯೊಳಗೆ ಮಣ್ಣಿನಡಿ ಸಿಲುಕಿದ್ದ ಸಹೋದರಿಯರಾದ ಶ್ರುತಿ (11) ಮತ್ತು ಗಾನಶ್ರೀ (6) ಮೃತಪಟ್ಟಿದ್ದರು. ಮೃತ ಮಕ್ಕಳ

ಅಂತ್ಯಸಂಸ್ಕಾರ ಪಂಜ ಕರಿಮಜಲಿನಲ್ಲಿ ನಡೆಸಲಾಯಿತು. ಇಡೀ ಊರಿಗೆ ಊರೇ ದುಃಖತಪ್ತವಾಗಿತ್ತು. ಮಕ್ಕಳ ಸಾವಿಗೆ ಸುಬ್ರಹ್ಮಣ್ಯ ಪರಿಸರದ ಜನರು ಕಣ್ಣೀರು ಹರಿಸಿದರು.

ಪಂಜದ ಕರಿಮಜಲು ಕುಸುಮಾಧರ ಮತ್ತು ರೂಪಶ್ರೀ ದಂಪತಿಯ ಮಕ್ಕಳಾದ ಶ್ರುತಿ  ಮತ್ತು ಗಾನಶ್ರೀ ಇವರಲ್ಲಿ ಶ್ರುತಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಶಾಲೆಯಲ್ಲಿ 5ನೇ ತರಗತಿ ಹಾಗೂ ಗಾನಶ್ರೀ ಸುಬ್ರಹ್ಮಣ್ಯ ಸರಕಾರಿ ಹಿರಿಯ 

ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿ ಕಲಿಯುತ್ತಿದ್ದರು. ಅಂದು ಸೋಮವಾರ ಸಂಜೆಯಿಂದಲೇ ಧಾರಾಕಾರ ಮಳೆ ಸುಬ್ರಹ್ಮಣ್ಯ ಪರಿಸರದಲ್ಲಿ ಸರಿಯಲಾರಂಭಿಸಿತ್ತು. ರಾತ್ರಿ ಸುಮಾರು 8.30ರ ವೇಳೆಗೆ ಪರ್ವತಮುಖಿಯಲ್ಲಿ ಕುಸುಮಾಧರ ಎಂಬವರ ಮನೆಯ ಹಿಂಭಾಗಕ್ಕೆ ಗುಡ್ಡ ಕುಸಿದು ಬಿತ್ತು. ಭಾರೀ ಶಬ್ದಕ್ಕೆ ತಾಯಿ ರೂಪಾಶ್ರೀ ಅವರು ಇನ್ನೊಂದು ಮಗುವಿನ ಜತೆ ಹೊರಗೋಡಿ ಬಂದರೆ, ಒಳಗಿನ ಕೋಣೆಯಲ್ಲಿ ಓದುತ್ತಿದ್ದ ಸಹೋದರಿಯರಾದ ಶ್ರುತಿ ಹಾಗೂ ಗಾನಶ್ರೀ ಅವರು ಮಣ್ಣಿನಡಿಗೆ ಸಿಲುಕಿದ್ದರು. ಮಕ್ಕಳ ರಕ್ಷಣೆಗೆ ತಕ್ಷಣ ಜೇಸಿಬಿ ಕಾರ್ಯಾಚರಣೆ ಆರಂಭಿಸಿದರು. ಆದರೆ ಮಣ್ಣಿನಿಂದ ಹೊರ ತೆಗೆಯುವ ವೇಳೆ ಇಬ್ಬರು ಮಕ್ಕಳು ಇಹಲೋಕ ತ್ಯಜಿಸಿದ್ದರು. ಮನೆ ಮಂದಿ ಹಾಗೂ ಊರವರು

ಆ ದೇವರಲ್ಲಿ ಮಾಡಿದ ಪ್ರಾರ್ಥನೆ ಫಲಿಸಲೇ ಇಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು