10:18 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಷಷ್ಠಿ ಮಹಾರಥೋತ್ಸವ ಸಂಪನ್ನ: ರಥಾರೂಢರಾಗಿ ವಿರಾಜಿಸಿದ ಸುಬ್ರಹ್ಮಣ್ಯ ದೇವರು; ಸಾವಿರಾರು ಭಕ್ತರು ಭಾಗಿ

19/12/2023, 17:51

ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ದೇಶದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖ ಚಂಪಾ ಷಷ್ಠಿಯ ಮಹಾರಥೋತ್ಸವ ಇಂದು ಬೆಳಗ್ಗೆ ನೆರವೇರಿತು. ಬ್ರಹ್ಮರಥದಲ್ಲಿ ಸುಬ್ರಹ್ಮಣ್ಯ ದೇವರು ಆಸೀನರಾಗಿ ರಥೋತ್ಸವ ನಡೆಯಿತು.


ಸಾವಿರಾರು ಭಕ್ತರು ಸೇರಿ ದೇವರ ಮಹಾರಥವನ್ನು ಎಳೆದರು. ಬ್ರಹ್ಮರಥವು ರಥಬೀದಿಯಲ್ಲಿ ಮುನ್ನಡೆಯಿತು. ವರ್ಷದಲ್ಲಿ ಒಂದು ಬಾರಿ ನಡೆಯುವ ರಥೋತ್ಸವ ಸಂದರ್ಭ ಸಹಸ್ರಾರು ಮಂದಿ ಶ್ರೀ ದೇವರ ವೈಭವದ ರಥೋತ್ಸವ ವೀಕ್ಷಿಸಿ ಕೃತಾರ್ಥರಾದರು. ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.
ರಥೋತ್ಸವದ ಮೊದಲು ದೇವಸ್ಥಾನದ ಹೊರಾಂಗಣದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು. ಅನಂತರ ರಾಜಬೀದಿಯಲ್ಲಿ ನಾಗಸ್ವರ, ಪಂಚವಾದ್ಯ, ಬ್ಯಾಂಡ್, ಜಾಗಟೆ, ಶಂಖ ವಾದ್ಯ ಮತ್ತು ಚೆಂಡೆ ವಾದನಗಳ ಹಿಮ್ಮೇಳದಲ್ಲಿ ಆನೆ, ಬಿರುದಾವಳಿ, ಭಕ್ತಜನರ ಜಯಘೋಷದ ನಡುವೆ ಬೆಳಗ್ಗೆ 7.33 ಧನುರ್ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ರಥಾರೂಢರಾದರು. ಪಂಚಮಿ ರಥದಲ್ಲಿ ಉಮಾಮಹೇಶ್ವರ ದೇವರು ಆಸೀನರಾದರು. ಈ ಸಂದರ್ಭದಲ್ಲಿ
ಈ ಸಂದರ್ಭಗಳಲ್ಲಿ ಸುಳ್ಯ ದ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ಮುಲೈ ಮುಗಿಲನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮೋಹನ್ ರಾಂ ಸುಳ್ಳಿ, ಎಸ್.ಪಿ ಸಿ.ಬಿ ರಿಷ್ಯಂತ್, ಪುತ್ತೂರು ಸಹಾಯಕ ಕಮಿಷನರ್ ಗಿರೀಶ್ ನಂದನ್, ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಪಿ.ಜಿ.ಎಸ್.ಎನ್.ಪ್ರಸಾದ್, ಮನೋಹರ ರೈ, ಶ್ರೀವತ್ಸಾ, ಕಡಬ, ಲೊಕೇಶ್ ಮುಂಡೊಕಜೆ, ವನಜಾ.ವಿ.ಭಟ್, ಶೋಭಾ ಗಿರಿಧರ್ ಸೇರಿದಂತೆ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರು, ದೇವಳದ ಸಿಬ್ಬಂದಿಗಳು ಸೇರಿದಂತೆ ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು