10:01 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಮಣ್ಯ ದೇವಸ್ಥಾನ: ಜ.2ರಿಂದ 5ರವರೆಗೆ ಕಿರುಷಷ್ಠಿ ಮಹೋತ್ಸವ

01/01/2025, 22:54

ಕುಕ್ಕೆ ಸುಬ್ರಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಜನವರಿ 5ರಂದು ಕಿರುಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಇದರ ಅಂಗವಾಗಿ ಜನವರಿ 2ರಿಂದ 5ರವರೆಗೆ ಧಾರ್ಮಿಕ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ನಾಳೆ (ಜ.2) ಸಂಜೆ 5:30ರಿಂದ ಧರ್ಮ ಸಮ್ಮೇಳನ ಸಭಾ ಕಾರ್ಯಕ್ರಮ ಜರುಗಲಿದ್ದು ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಜೆ 6:30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.
ಅದೇ ರೀತಿ ಜನವರಿ 5ರವರೆಗೆ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು