ಇತ್ತೀಚಿನ ಸುದ್ದಿ
ಕುಕ್ಕೆ ಸುಬ್ರಮಣ್ಯಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ
15/02/2023, 14:07
ಕುಕ್ಕೆ ಸುಬ್ರಹ್ಮಣ್ಯ(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು
ಬುಧವಾರ ಪ್ರಸಿದ್ಧ ದೇಗುಲ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.



ಪತ್ನಿ ಅನಿತಾ ಗೆಹ್ಲೋಟ್ ಹಾಗೂ ಮೊಮ್ಮಕ್ಕಳಾದ ರಂಜನಿ, ಧೀರಜ್, ನವೀನ್ ಅವರು ರಾಜ್ಯಪಾಲರ ಜತೆಗಿದ್ದರು. ದೇವಸ್ಥಾನದ ಕಾರ್ಯಕಾರಿ ಅಧಿಕಾರಿ ನಿಂಗಯ್ಯ, ಸಮಿತಿ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಸದಸ್ಯರುಗಳಾಗ ಶ್ರೀವತ್ಸ, ಲೋಕೇಶ್, ಟ್ರಸ್ಟಿಗಳಾದ ವನಜ ಭಟ್, ಶೋಭಾ ಗಿರಿಜಾ ಅವರು ರಾಜ್ಯಪಾಲರಿಗೆ ಸ್ವಾಗತ ಕೋರಿದರು.
ನಂತರ ರಾಜ್ಯಪಾಲರು ಪತ್ನಿ ಅನಿತಾ ಗೆಹ್ಲೋಟ್ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭಧಲ್ಲಿ ಜಿಲ್ಲಾಧಿಕಾರಿ ರವಿಕುಮಾರ್, ಎಸ್ ಪಿ ವಿಕ್ರಮ್ ಅಮಾಟೆ ಮುಂತಾದವರು ಉಪಸ್ಥಿತರಿದ್ದರು.














