7:41 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕುಳಾಯಿ-ಹೊನ್ನಕಟ್ಟೆ: 98 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

04/01/2023, 22:46

ಸುರತ್ಕಲ್(reporterkarnataka.com): ಕುಳಾಯಿ ಹೊನ್ನಕಟ್ಟೆ ಮಸೀದಿ ಪಕ್ಕದ ರಸ್ತೆ ಕಾಮಗಾರಿ ಸಹಿತ 98 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು.

ಈ ವೇಳೆ ಮಾತಾಡಿದ ಶಾಸಕರು, “ಕುಳಾಯಿ ಹೊನ್ನಕಟ್ಟೆ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಒಂದು ತಿಂಗಳೊಳಗೆ ಮುಗಿಯಲಿದೆ. ಆ ಬಳಿಕ ಸುರತ್ಕಲ್ ಜಂಕ್ಷನ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಸುರತ್ಕಲ್ ಕ್ಷೇತ್ರವನ್ನು ಮಾದರಿಯನ್ನಾಗಿ ಪರಿವರ್ತಿಸಲು ವಿವಿಧ ವಾರ್ಡ್ ಗಳಲ್ಲಿ ರಸ್ತೆ ಅಭಿವೃದ್ಧಿ, ಪಾರ್ಕ್, ಕುಡಿಯುವ ನೀರು ಸಹಿತ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲಾಗುತ್ತಿದೆ” ಎಂದರು.

ಕಾರ್ಪೋರೇಟರ್ ವರುಣ್ ಚೌಟ, ಪಕ್ಷದ ವಿವಿಧ ಜವಾಬ್ದಾರಿಗಳನ್ನು ಹೊಂದಿರುವ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು