3:43 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರ

24/10/2024, 14:55

ಮಂಗಳೂರು(reporterkarnataka.com):ಮಂಗಳೂರು ಧರ್ಮಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯಲ್ಲಿ ಬರುವ ಕುಲಶೇಖರ, ಬೊಂದೇಲ್, ನೀರುಮಾರ್ಗ, ಪಾಲ್ದನೆ, ಬಜಾಲ್, ಕೆಲರೈ, ದೇರೆಬೈಲ್, ಪೆರ್ಮಯ್, ವಾಮಂಜೂರು, ಅಂಜೆಲೊರ್, ಶಕ್ತನಗರ ಇದರ 21 ಆಯೋಗದ ಸದಸ್ಯರಿಗೆ ಕಾರ್ಯಾಗಾರವನ್ನು ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನ ಸಭಾಂಗಣದಲ್ಲಿ ಏರ್ಪಡಿಸಲಾಗಿತು.
ಈ ಕಾರ್ಯಾಗಾರದಲ್ಲಿ ಚರ್ಚಿನ 21 ಆಯೋಗದ ಸದಸ್ಯರಿಗೆ ಮಾಹಿತಿ, ವಿಚಾರ ವಿನಿಮಯ, ಸಂದೇಹಗಳಿಗೆ ಉತ್ತರ ನೀಡುವ ಮೂಲಕ ಸಹಕಾರಿಯಾಯಿತು. ಕಾರ್ಯಾಗಾರದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವುಲ್ ಸಲ್ಡಾನ ಅವರು ಕಾರ್ಯಾಗಾರದ ಉದ್ಘಾಟಣೆ ಮಾಡಿ ಮಾಹಿತಿ ನೀಡಿದರು. ಮುಂದೆ ಸುಮಾರು 2 ಗಂಟೆಗಳ ಕಾಲ ವಂದನೀಯ ಪಾ| ಪಾವೊಸ್ತಿನ್ ಲೋಬೊ ಅವರು ಆಯೋಗದ ಬಗ್ಗೆ ಸವಿಸ್ತಾರವಾದ ವಿವರ ನೀಡಿದರು.
ವೇದಿಕೆಯಲ್ಲಿ ಸಿಟಿ ವಲಯದ ವಿಕಾರ್ ವಾರ್ ವಂ| ಪಾ| ಜೇಮ್ಸ್ ಡಿ’ಸೋಜ ಅವರು ಕಾರ್ಯಗಾರದ ಮಹತ್ವ ವಿವರಿಸಿ ಸ್ವಾಗತಿಸಿದರು. ವಂ| ಪಾ| ವಿಜಯ್ ಮೊಂತೆರೋ ಅವರು ಪ್ರಾರ್ಥನಾ ವಿದಿ ನೆರವೇರಿಸಿದರು.
ವ| ಪಾ| ಕ್ಲಾನೀ ಡಿ’ಸೋಜಾ, ವಂ| ಪಾ| ಆಲ್ವಿನ್ ಡಿ’ಸೋಜ, ಕೊರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್, ಧರ್ಮಪ್ರಾಂತ್ಯದ ಸಾರ್ವಜನಿಕ ಅಧಿಕಾರಿ ರೋಯ್ ಕ್ಯಾಸ್ಟಲೀನೊ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಎಲ್ಲಾ ಚರ್ಚುಗಳ ಧರ್ಮಗುರುಗಳು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಆಯೋಗದ ಸಂಚಾಲಕರು, ಧರ್ಮ ಭಗಿನಿಯರು ಭಾಗವಹಿಸಿದ್ದರು.
ಆಂಜೆಲೋರ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಫೆಡ್ರಿಕ್ ಮೊಂತೇರೊ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂತೋಷ್ ಡಿ’ಕೋಸ್ತಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು