1:29 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ

19/03/2023, 00:12

ಮಂಗಳೂರು(reporterkarnataka.com):ಇತಿಹಾಸ ಪ್ರಸಿದ್ದ ಮಂಗಳೂರಿನ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಸಮಗ್ರ ಜೀರ್ಣೋದ್ಧಾರಗೊಂಡು ಮೇ 14ರಿಂದ 24ರ ವರೆಗೆ ನಡೆಯಲಿರುವ ಬ್ರಹ್ಮ ಕಲಶೋತ್ಸವದ ಸಮಾಲೋಚನಾ ಸಭೆ ಕ್ಷೇತ್ರದ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು,
ಸಭೆಯಲ್ಲಿ ಬ್ರಹ್ಮ ಕಲಶೋತ್ಸವದ ಅಧ್ಯಕ್ಷರಾಗಿ ಪ್ರೇಮಾನಂದ ಕುಲಾಲ್ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮಾತನಾಡಿ, ದೇವಸ್ಥಾನ ಜೀರ್ಣೋದ್ಧಾರಗೊಂಡಾಗ ಗ್ರಾಮ ಅಭಿವೃದ್ಧಿಯಾಗುತ್ತದೆ. ಸಮಾಜ ಬಲಿಷ್ಠ ಕೊಳ್ಳುತ್ತದೆ. ದೇವಸ್ಥಾನ ಧಾರ್ಮಿಕ ಕೇಂದ್ರವಾಗದೆ ಸಾಮಾಜಿಕ ಶೈಕ್ಷಣಿಕ ಸೇವಾಕಾರ್ಯಗಳ ಕೇಂದ್ರವಾಗಲಿದೆ‌. ವೀರನಾರಾಯಣ ಕ್ಷೇತ್ರ ಹಿಂದು ಸಮಾಜದ ಪವಿತ್ರ ಕ್ಷೇತ್ರವಾಗಲಿದೆ ಎಂದು ನುಡಿದರು‌.

ವೀರನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ಕುಲಾಲ್ ಕಲ್ಪಾವಿ ಜೀರ್ಣೋದ್ಧಾರದ ಪ್ರಕ್ರಿಯೆಗೆಗಳ ಬಗ್ಗೆ ಮತ್ತು ಸಮಿತಿಯ ಪದಾಧಿಕಾರಿಗಳ ಸದಸ್ಯರ ಯಾದಿಯನ್ನು ವಾಚಿಸಿದರು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಎ. ದಾಮೋದರ್ ಪ್ರಾಸ್ತಾವಿಕ ಮಾತುಗಳಾಡಿದರು. ವೇದಿಕೆಯಲ್ಲಿ ದೇವಸ್ಥಾನದ ಮಹಿಳಾ ವಿಭಾಗದ ಅಧ್ಯಕ್ಷ ಗೀತಾ ಮನೋಜ್, ಮುಂಬಯಿ ಸಮಿತಿಯ ಅಧ್ಯಕ್ಷ ಬಿ. ದಿನೇಶ್ ಕುಲಾಲ್, ಬೆಂಗಳೂರು ಸಮಿತಿಯ ಅಧ್ಯಕ್ಷ ಮಾಧವ ಕುಲಾಲ್ ಉಪಸ್ಥತರಿದ್ದರು.


ಪ್ರೇಮಾನಂದ ಕುಲಾಲ್ ಮಾತನಾಡುತ್ತಾ ಭಕ್ತಾಭಿಮಾನಿಗಳ ಸಹಕಾರದಿಂದ ದೇವಸ್ಥಾನದ ಜೀರ್ಣೋದಾರದ ಕಾರ್ಯ ವೇಗದಲ್ಲಿ ಸಾಗುತ್ತಿದೆ. ಮುಂದೆ ನಡೆಯಲಿರುವ ಬ್ರಹ್ಮ ಕಲಶ ಅಭೂತಪೂರ್ವಾಗಿ ನಡೆಯುವುದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ನುಡಿದರು.
ಕಾರ್ಯಕ್ರಮವನ್ನು ನ್ಯಾಯವಾದಿ ರವೀಂದ್ರ ಮುನ್ನಿಪಾಡಿ, ನಿರೂಪಿಸಿದರು, ಸದಾಶಿವ ಕುಲಾಲ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು