5:47 PM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕೂಳೂರಿನಲ್ಲಿ ಅಯ್ಯಪ್ಪ ದೇವಸ್ಥಾನ ನಿರ್ಮಾಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶಂಕುಸ್ಥಾಪನೆ

26/03/2023, 00:15

ಸುರತ್ಕಲ್(reporterkarnataka.com):
ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿ ಹೊಸ ಸೇತುವೆ ನಿರ್ಮಾಣ ಸಂದರ್ಭ ಸ್ಥಳಾಂತರಗೊಂಡಿದ್ದ ಕೂಳೂರು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಡಾ.ಭರತ್‌ ಶೆಟ್ಟಿ ವೈ ಶಂಕು ಸ್ಥಾಪನೆ ನೆರವೇರಿಸಿದರು.
ದೇವಸ್ಥಾನ ಸರಕಾರಿ ಭೂಮಿಯಲ್ಲಿದ್ದರೂ, ಸ್ಥಳಾಂತರದ ಸಂದರ್ಭ ಇದರ ಸಮಿತಿಯವರು ಶಾಸಕರಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ದೊರಕಿಸುವಂತೆ ಮನವಿ ಮಾಡಿದ ಮೇರೆಗೆ ಬಂಗ್ರಕೂಳೂರು ರಸ್ತೆ ಬದಿ 55 ಸೆಂಟ್ ಸರಕಾರಿ ಜಾಗವನ್ನು ಮಾಡಿಕೊಟ್ಟಿದ್ದು, ಈ ಸಂದರ್ಭ ಸಮಿತಿ ವತಿಯಿಂದ ಶಾಸಕರನ್ನು ಸಮ್ಮಾನಿಸಲಾಯಿತು. ಮುಂದಿನ ದಿನಗಳಲ್ಲಿ ಅಯ್ಯಪ್ಪ ಮಾಲಾ ವೃತಧಾರಿಗಳಿಗೆ ಇಲ್ಲಿ ತಂಗಲು ಸಮುದಾಯ ಭವನದ ಭರವಸೆಯನ್ನು ಶಾಸಕರು ನೀಡಿದರು.


ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮನಪಾ ಸದಸ್ಯ ಅನಿಲ್‌ ಕುಮಾರ್, ದೇವಸ್ಥಾನದ ಸಮಿತಿ ಗೌರವಾಧ್ಯಕ್ಷ ಸುರೇಶಂದ್ರ ಶೆಟ್ಟಿ, ಪ್ರಮುಖರಾದ ಪ್ರಜ್ಞೇಶ್ ಶೆಟ್ಟಿ, ರಮೇಶ್ ಶೆಟ್ಟಿ, ದೇವಸ್ಥಾನದ ತಂತ್ರಿಗಳು, ಆಡಳಿತ ಸಮಿತಿಯವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು