3:55 AM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಕೂಳೂರು ನೂತನ ಸೇತುವೆ ಕಾಮಗಾರಿ 3 ವರ್ಷಗಳಿಂದ ನನೆಗುದಿಗೆ: ಸಿಪಿಎಂ ಪ್ರತಿಭಟನೆ

10/03/2023, 20:43

ಮಂಗಳೂರು(reporterkarnataka.com): ಕೂಳೂರು ನದಿ ಸೇತುವೆ ಕಾಮಗಾರಿ ಪ್ರಾರಂಭವಾಗಿ ಮೂರು ವರ್ಷ ಕಳೆದಿದೆ. ಹಳೆ ಸೇತುವೆ ಅಸಮರ್ಥ ಎಂದು ಹೆದ್ದಾರಿ ಪ್ರಾಧಿಕಾರದ ತಜ್ಞರು ವರದಿ ನೀಡಿ ನಾಲ್ಕು ವರ್ಷ ದಾಟಿದೆ. ಮಳೆಗಾಲ ಸಮೀಪಿಸುತ್ತಿದ್ದು ನದಿ ಸೇತುವೆ ಕಾಮಗಾರಿಗೆ ಹಾಕಿರುವ ಭಾರೀ ಮಣ್ಣಿನ ಪ್ರಮಾಣದಿಂದ ಕೂಳೂರು ನದಿ ಪಾತ್ರದ ಪ್ರದೇಶಕ್ಕೆ ಮಳೆ ನೀರು ನಗ್ಗುವ ಅಪಾಯ ಒಂದೆಡೆಯಾದರೆ, ಹಳೆ ಸೇತುವೆ ಕುಸಿಯುವ ಭೀತಿ ಇನ್ನೊಂದೆಡೆ. ಆದುದರಿಂದ ಕಾಮಗಾರಿಯನ್ನು ಶೀಘ್ರವಾಗಿ ನಡೆಸಬೇಕು ಎಂದು ಒತ್ತಾಯಿಸಿ ಇಂದು ಸಿಪಿಎಂ ಪಂಜಿಮೊಗರು ವಲಯ ಸಮಿತಿ‌ ಕೂಳೂರು ಸೇತುವೆ ಬಳಿ ಪ್ರತಿಭಟನೆ ನಡೆಸಿತು.


ಪ್ರತಿಭಟನೆ ಉದ್ದೇಶಿಸಿ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ ಮಾತನಾಡಿ, ಕೂಳೂರು ಸೇತುವೆ ಕಾಮಗಾರಿ ಮೂರು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ಇದು ಮತ್ತೊಂದು ಪಂಪ್ವೆಲ್ ಆಗದಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ‌. ಇಮ್ತಿಯಾಝ್ ಮಾತನಾಡಿ, ಸ್ಥಳೀಯ ಶಾಸಕರಿಗೆ ಕಾಮಗಾರಿ ನಡೆಸುವ ಆಸಕ್ತಿ ಇಲ್ಲ. ಸುರತ್ಕಲ್ ಟೋಲ್ ಬಂದ್ ಮಾಡಿ ನೂರು ದಿನಗಳು‌ ಕಳೆದರೂ ಕೂಡ ಅಲ್ಲಿ ಟೋಲ್ ಗೂಡುಗಳು ಅಸ್ಥಿಪಂಜರದ ರೀತಿ ಉಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐಎಂ ಪಂಜಿಮೊಗರು ಮುಖಂಡರಾದ ಅನಿಲ್, ಪ್ರಮೀಳಾ, ಸೌಮ್ಯ, ಬಾವು, ಶೆರೀಫ್, ಬಶೀರ್, ಸಂತೋಷ್, ಕಸ್ತೂರಿ, ಫಾತಿಮಾ ಖಲೀಲ್ , ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ಮಕ್ಸೂದ್ ಕಾನ, ದಲಿತ ಸಂಘಟನೆಯ ಕೃಷ್ಣ ತಣ್ಣೀರುಬಾವಿ ಸಾಮಾಜಿಕ ಮುಂದಾಳುಗಳಾದ ಕನಕದಾಸ್, ಹನೀಫ್ ಕೂಳೂರು ಮತ್ತಿತರರು ಭಾಗವಹಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು