12:22 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕುಮಾರಸ್ವಾಮಿ ಅವರನ್ನು ಮುಗಿಸಲು ಕಾಂಗ್ರೆಸ್ ಗೆ ಸಾಧ್ಯವಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗು

12/01/2025, 22:36

ಬೆಂಗಳೂರು(reporterkarnataka.com): ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಡುಗಿದರು.
ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಹೇಳಿದರು.
ಕುಮಾರಸ್ವಾಮಿ ಅವರನ್ನು ಮುಗಿಸಿದರೆ ಜೆಡಿಎಸ್ ಮುಗಿದು ಹೋಗುತ್ತದೆ ಎಂದು ಕಾಂಗ್ರೆಸ್ ನಂಬಿದೆ. ಅದಕ್ಕೆ ಕಾರಣ ಇಷ್ಟೇ… ಕುಮಾರಸ್ವಾಮಿ ಅವರ ಹಿಂದೆ ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ಅವರು ಬಲಿಷ್ಠವಾಗಿ ನಿಂತಿದ್ದಾರೆ. ಹೀಗಾಗಿ ಅವರನ್ನು ಮುಗಿಸುವುದು ಸಾಧ್ಯವಿಲ್ಲದ ಮಾತು ಅವರು ಹೇಳಿದರು.
ಜೆಡಿಎಸ್ ಕುಟುಂಬ ಆಧಾರಿತ ಪಕ್ಷ ಎಂದು ಕಾಂಗ್ರೆಸ್ ಹೇಳುತ್ತದೆ. ಯಾರಾದರೂ ಒಮ್ಮೆ ಕಾಂಗ್ರೆಸ್ ಪಕ್ಷದ ಕಚೇರಿಗೆ ಹೋಗಿ ಅಲ್ಲಿ ಗೋಡೆಗಳ ಮೇಲೆ ನೇತು ಹಾಕಿರುವ ಫೋಟೋಗಳನ್ನು ಒಮ್ಮೆ ನೋಡಿ. ಕುಟುಂಬ ಆಧಾರಿತ ಪಾರ್ಟಿ ಯಾವುದು ಎನ್ನುವುದು ಗೊತ್ತಾಗುತ್ತದೆ ಎಂದು ಮಾಜಿ ಪ್ರಧಾನಿಗಳು ಗುಡುಗಿದರು.
ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಹಿಂದೆ ಬೀಳುವುದು ಬೇಡ. ಎಲ್ಲಾರೂ ಒಟ್ಟಾಗಿ ಪಕ್ಷ ವಹಿಸುವ ಕೆಲಸ ಮಾಡೋಣ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು