2:06 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ಪಣೋಲಿಬೈಲು ಕ್ಷೇತ್ರಕ್ಕೆ ಕುಂಭ ನಿಗಮ ಅಧ್ಯಕ್ಷ ಡಾ. ವೇಲು ಭೇಟಿ

23/05/2026, 18:41

ಬಂಟ್ವಾಳ(reporterkarnataka.com): ರಾಜ್ಯ ಸರ್ಕಾರದ ನೂತನ ಕುಂಭ ನಿಗಮದ ಅಧ್ಯಕ್ಷ ಡಾ. ವೇಲು ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸದ ಅಂಗವಾಗಿ ಬಂಟ್ವಾಳದ ಪಣೋಲಿಬೈಲು ಕ್ಷೇತ್ರಕ್ಕೆ ಭೇಟಿ ನೀಡಿದರು.
ಬಳಿಕ ಪಣೋಲಿಬೈಲು ಕ್ಷೇತ್ರದ ಭಂಡಾರದ ಮನೆಯಲ್ಲಿ ಕುಲಾಲ ಸಮಾಜ ಬಾಂಧವರ ವತಿಯಿಂದ ಅವರಿಗೆ ಆತ್ಮೀಯ ಸನ್ಮಾನ ಕಾರ್ಯಕ್ರಮ ನಡೆಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ವೇಲು ಅವರು, ಕುಲಾಲ ಸಮುದಾಯದ ಸಂಘಟನೆ ಮತ್ತು ಸಾಮಾಜಿಕ ಚಟುವಟಿಕೆಗಳು ಮತ್ತಷ್ಟು ಬಲಿಷ್ಠವಾಗಬೇಕಿದ್ದು, ಸಮಾಜದ ಏಳಿಗೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವವೇದಿಕೆ ಸ್ಥಾಪಕಾಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಪಂಜಿಕಲ್ಲು, ಕುಲಾಲ ಕುಂಬಾರ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಅನಿಲ್ ದಾಸ್, ಮಾಣಿಲ ಕ್ಷೇತ್ರ ಟ್ರಸ್ಟಿ ಚಂದ್ರಶೇಖರ, ದ.ಕ. ಜಿಲ್ಲಾ ಕೋಳಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ದಯಾನಂದ ಅಡ್ಯಾರ್, ಮಂಗಳೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ನಾವೂರು, ಭಂಡಾರದ ಮನೆಯ ನವೀನ್ ಕುಲಾಲ್, ರಮೇಶ್ ಕುಲಾಲ್, ಶಿವಾನಂದ ಕುಲಾಲ್, ಮಾಜಿ ಬೂಡಾ ಸದಸ್ಯ ಸದಾಶಿವ ಬಂಗೇರ, ಮಾದ್ಯಮ ಪ್ರತಿನಿಧಿ ಜಯಂತ್ ಸಂಕೋಲಿಗೆ, ಬಂಟ್ವಾಳ ಕುಲಾಲ ಸಂಘದ ಅಧ್ಯಕ್ಷ ಬಿ. ರಮೇಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಯಾದವ ಅಗ್ರಬೈಲು, ಕೋಶಾಧಿಕಾರಿ ಸೋಮನಾಥ ಸಾಲ್ಯಾನ್, ಮಾಜಿ ಅಧ್ಯಕ್ಷ ಮಚ್ಚೇಂದ್ರ ಸಾಲ್ಯಾನ್, ಹಿರಿಯ ನಾಗರಿಕ ಸಂಘದ ಮಾಜಿ ಅಧ್ಯಕ್ಷ ಸೇಸಪ್ಪ ಮಾಸ್ತರ್, ಕುಲಾಲ ಯುವವೇದಿಕೆ ಮಾಜಿ ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ್, ಬಂಟ್ವಾಳ ಕುಲಾಲ ಯುವವೇದಿಕೆ ಅಧ್ಯಕ್ಷ ಸುಮಿತ್ ಸೊರ್ನಾಡ್, ಮಹಿಳಾ ಮಾಜಿ ಅಧ್ಯಕ್ಷೆ ಭಾರತಿ ಸೇಸಪ್ಪ ಸೇರಿದಂತೆ ಕುಲಾಲ ಸಮಾಜದ ಮುಖಂಡರು ಹಾಗೂ ಬಾಂಧವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು