5:40 AM Saturday11 - October 2025
ಬ್ರೇಕಿಂಗ್ ನ್ಯೂಸ್
ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ… ಮೂಡಿಗೆರೆಯಲ್ಲಿ ಭಯಾನಕ ಅಪಘಾತ | ಬೈಕ್ ಮೇಲೇರಿದ ಕ್ರೇನ್: ಮಹಿಳೆ ಸ್ಥಳದಲ್ಲೇ ಸಾವು;…

ಇತ್ತೀಚಿನ ಸುದ್ದಿ

ಕುಮ್ಡೇಲು: ಶ್ರೀ ನಾಗಬ್ರಹ್ಮ ಸನ್ನಿಧಿ ಶ್ರೀ ಕೊರ‍್ದಬ್ಬು ದೈವಸ್ಥಾನದ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಧಾರ್ಮಿಕ ಸಭೆ

24/04/2025, 12:29

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಹಿಂದೂ ಸಮಾಜ ಸಂಘಟಿತವಾಗದೇ ಇದ್ದರೆ ಕಾಶ್ಮೀಯದಂತಹ ದಾಳಿಗಳು ನಮ್ಮ ಊರಿನಲ್ಲೂ ನಡೆಯುವ ಅಪಾಯವಿದ್ದು, ಧಾರ್ಮಿಕ ಕ್ಷೇತ್ರಗಳ ಪುನರುತ್ಥಾನದ ಮೂಲಕ ಸಮಾಜ ಒಗ್ಗಟ್ಟಾಗಬೇಕಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಅವರು ಕುಮ್ಡೇಲು ಶ್ರೀ ನಾಗಬ್ರಹ್ಮ ಸನ್ನಿಧಿ ಶ್ರೀ ಕೊರ‍್ದಬ್ಬು ದೈವಸ್ಥಾನದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಹಾಗೂ ೭೫ನೇ ವರ್ಷದ ನೇಮದ ಸುಧರ್ಮ ಸಭೆಯಲ್ಲಿ ಮಾತನಾಡಿದರು. ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷ ಉಮೇಶ್ ಸಾಲ್ಯಾನ್ ಬೆಂಜನಪದವು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಭರತ್ ಕುಮ್ಡೇಲು ಅವರ ನೇತೃತ್ವದಲ್ಲಿ ಹೊರ ತಂದ ಭಕ್ತಿಗೀತೆಯನ್ನು ಬಿಡುಗಡೆಗೊಳಸಲಾಯಿತು. ಕಾಶ್ಮೀರದಲ್ಲಿ ಉಗ್ರರಿಂದ ಹತ್ಯೆಯಾದವರಿಗೆ ಮೌನ ಪ್ರಾರ್ಥನೆಯ ಗೌರವ ಸಲ್ಲಿಸಲಾಯಿತು.
ವೇದಿಕೆಯಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ಬಾರ್ಕೂರು ಶ್ರೀ ಕಚ್ಚೂರ ಮಾಲ್ದಿದೇವಿ ದೇವಸ್ಥಾನದ ಅಧ್ಯಕ್ಷ ಶಿವಪ್ಪ ನಂತೂರು, ನೈಜೀರಿಯಾದ ಉದ್ಯಮಿ ಅಜಿತ್ ಚೌಟ ದೇವಸ್ಯ, ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು, ಬಂಟ್ವಾಳ ವಿಹಿಂಪ ಅಧ್ಯಕ್ಷ ಪ್ರಸಾದ್‌ಕುಮಾರ್ ರೈ, ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿವಾಕರ ಪಂಬದಬೆಟ್ಟು, ದೈವ ನರ್ತಕ ನೋಣಯ್ಯ ನಲಿಕೆ ಕೆಂಜಿಲ, ಉದ್ಯಮಿ ಧನರಾಜ್ ಶೆಟ್ಟಿ ತೇವು, ಕ್ಷೇತ್ರದ ಆಡಳಿತ ಮೊಕ್ತೇಸರ ಭಾಸ್ಕರ ಚೌಟ ಕುಮ್ಡೇಲು, ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಪ್ರಕಾಶ್ಚಂದ್ರ ರೈ ದೇವಸ್ಯ, ಗುರಿಕಾರ ವೆಂಕಪ್ಪ ಕುಮ್ಡೇಲು ಉಪಸ್ಥಿತರಿದ್ದರು.
ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಉಮೇಶ್ ಶೆಟ್ಟಿ ಬರ್ಕೆ ಸ್ವಾಗತಿಸಿದರು. ವೇದಿಕೆ ಸಮಿತಿ ಸದಸ್ಯ ಶರಣ್ ಭಂಡಾರಿ ವಂದಿಸಿದರು.ಯಕ್ಷ ಸಂಘಟಕ ಜನಾರ್ದನ ಅಮ್ಮುಂಜೆ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು