3:15 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕುಮಟಾದಲ್ಲಿ ನಡೆದ ಪೊಲೀಸ್ ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬದ ವಿವಾಹ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

30/12/2021, 18:55

ಕುಮಟಾದಲ್ಲಿ(reporterkarnataka.com):

ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿದ   ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಕೀರ್ತಿ ಕುಟುಂಬದ ವಿವಾಹ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಿ ದೌರ್ಜನ್ಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದರು.

ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬದ ಯುವಕನ ಮದುವೆಯು ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಇಂದು ನಡೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹಬ್ಬಳ್ಳಿಯಿಂದ ನೇರವಾಗಿ ಕುಮಟಾಕ್ಕೆ ಆಗಮಿಸಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡು ನವ ವಧು- ವರರನ್ನು ಆಶೀರ್ವದಿಸಿದರು.

ಕೋಟದವರಾದ ಸಚಿವರು ಈ ಸಂದರ್ಭದಲ್ಲಿ ಮಾತನಾಡಿ, ಈ ಕೇರಿಯನ್ನು ನಾನು ಹತ್ತಿರದಿಂದ ಕಂಡಿದ್ದೇನೆ, ಅವರೆಲ್ಲರ ಆತ್ಮೀಯತೆಯನ್ನು ಗಳಿಸಿದ್ದೇನೆ. ನನ್ನೂರ ಭಾಗದಲ್ಲಿ ಇರುವಂತಹ ಏಕೈಕ ಕೊರಗರ ಕೇರಿ ಇದಾಗಿದೆ. ಈ ಮುಗ್ಧ ಜನರ ಮೇಲೆ ಹಲ್ಲೆ ನಡೆದದ್ದು ನೋವಿನ ಸಂಗತಿ ಎಂದರು.
ಸಚಿವರು ಸಂತ್ರಸ್ತ ಕುಟುಂಬದವರ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು