9:16 PM Sunday27 - July 2025
ಬ್ರೇಕಿಂಗ್ ನ್ಯೂಸ್
Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ…

ಇತ್ತೀಚಿನ ಸುದ್ದಿ

ಕುಂದಾಪುರ, ಬೈಂದೂರು: ಅಕ್ರಮ ಮರಳುಗಾರಿಕೆ ಧಕ್ಕೆಗೆ ಗಣಿ ಇಲಾಖೆ ತಂಡ ದಾಳಿ: 3 ಲಾರಿ ವಶ

21/09/2022, 21:02

ಕುಂದಾಪುರ(reporterkarnataka.com);ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ಮುಂಜಾನೆ ಎರಡು ಕಡೆಗಳಲ್ಲಿ  ಗಣಿ ಮತ್ತು ಭೂವಿಜ್ಞಾನ ಇಲಾಖೆಯ  ಭೂವಿಜ್ಞಾನಿ ಸಂಧ್ಯಾ ಅವರು ದಾಳಿ ನಡೆಸಿ 3 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. 

ಕುಂದಾಪುರ ತಾಲೂಕು ತ್ರಾಸಿ,  ಮೊವಾಡಿ ಗ್ರಾಮ ಹಾಗೂ ಬೈಂದೂರು ತಾಲೂಕಿನ ಮರವಂತೆ ಹಾಗೂ ಬಡಾಕೆರೆ ಗ್ರಾಮ ವ್ಯಾಪ್ತಿಯಲ್ಲಿ ಸೌಪರ್ಣಿಕಾ ನದಿಯಿಂದ  ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ  ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ..

ತ್ರಾಸಿ ಗ್ರಾಮದ ಆನಗೋಡು ಎಂಬಲ್ಲಿ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ ಒಂದು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅರಮ ದೇವಸ್ಥಾನದ  ಹತ್ತಿರದ ಅನಧಿಕೃತ ಮರಳು ಗಣಿಗಾರಿಕೆ ದಕ್ಕೆಗೆ ದಾಳಿ ನಡೆಸಿ ಮರಳು ತುಂಬಲು ದಕ್ಕೆಯಲ್ಲಿ ನಿಂತಿದ್ದ 2 ಟಿಪ್ಪರ್  ಲಾರಿಗಳನ್ನು  ವಶಕ್ಕೆ ತೆಗೆದುಕೊಂಡಿದ್ದಾರೆ. ತ್ರಾಸಿ ವ್ಯಾಪ್ತಿಯ ಅನಧಿಕೃತ ಮರಳು ದಕ್ಕೆಗಳಿಗೆ ದಾಳಿಯಾಗುತ್ತಿದ್ದಂತೆ, ಕುಂದಾಪುರ ವ್ಯಾಪ್ತಿಯ ಹಕ್ಲಾಡಿ, ಕಾವ್ರಾಡಿ , ಹಳ್ನಾಡು, ಅಂಪಾರು ಹಾಗೂ ಬೈಂದೂರು ತಾಲೂಕು  ಬಡಾಕೆರೆ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಯನ್ನು ನಡೆಸುತ್ತಿದ್ದವರು ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಸ್ಥಗಿತಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅನಧಿಕೃತ ಮರಳು ಗಣಿಗಾರಿಕೆಗೆ ದಕ್ಕೆ ಹಾಗೂ ಸಾಗಾಣಿಕೆಗೆ ರಸ್ತೆಯನ್ನು ಕೆಲವು ಖಾಸಗಿ (ಪಟ್ಟಾ) ಜಾಗಗಳಲ್ಲಿ ನೀಡಿರುವುದು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದಿದ್ದು, ಅಂತಹ ಜಾಗದ ಪಟ್ಟಾದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭೂವಿಜ್ಞಾನಿಯವರು ತಿಳಿಸಿರುತ್ತಾರೆ.

ಭೂವಿಜ್ಞಾನಿ ಯವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ  ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ ಸದರಿ  ಲಾರಿಗಳನ್ನು  ಗಂಗೊಳ್ಳಿ ಪೊಲೀಸ್ ಠಾಣೆ ಸುಪರ್ದಿಯಲ್ಲಿ ಇರಿಸಲಾಗಿದೆ‌.

ಇತ್ತೀಚಿನ ಸುದ್ದಿ

ಜಾಹೀರಾತು