5:39 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್ ಅಧಿವೇಶನದಲ್ಲಿ ಶಾಸಕ ಡಾ. ಮಂಜುನಾಥ ಭಂಡಾರಿ ಆಗ್ರಹ

14/02/2023, 21:55

ಬೆಂಗಳೂರು(reporterkarnataka.com): ಕುಂದಾಪ್ರ ಭಾಷೆ, ಸಂಸ್ಕೃತಿಯ ವಿಚಾರದಲ್ಲಂತೂ ಇದು ತನ್ನದೇ ಆದ ವೈಶಿಷ್ಟ್ಯವನ್ನು ಉಳಿಸಿಕೊಂಡಿದೆ. ಬೈಂದೂರಿನಿಂದ ಬ್ರಹ್ಮಾವರದವರೆಗೆ, ಇತ್ತ ಬಸ್ರೂರಿನಿಂದ ಹೆಬ್ರಿ ತನಕ ಮಲೆನಾಡು, ಕರಾವಳಿ 300 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಂದ ಕನ್ನಡ ಭಾಷೆಯಲ್ಲೇ ಸ್ಪಷ್ಟವಾಗಿ ಮಾತನಾಡುವ 25 ಲಕ್ಷಕ್ಕೂ ಹೆಚ್ಚು ಜನರಿದ್ದು, ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆ ಅಗತ್ಯವಿದೆ ಎಂದು
ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಒತ್ತಾಯಿಸಿದರು.

ಅವರು ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಸರಕಾರದ ಗಮನ ಸೆಳೆದರು.ಕುಂದಾಪುರವು ರಾಜ್ಯ, ದೇಶಕ್ಕೆ ವಿವಿಧ ವಿಷಯಗಳಲ್ಲಿ ಅದ್ಬುತ ಕೊಡುಗೆ ನೀಡಿದ ಊರು.
ಜನರ ಆಟ ಪಾಠಗಳಲ್ಲಿ, ಕೃಷಿ, ಮೀನುಗಾರಿಕೆ ಚಟುವಟಿಕೆಗಳಲ್ಲಿ, ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ಕಂಬಳ, ಕೋಲ, ಹೋಳಿ ಆಚರಣೆಗಳಲ್ಲಿ ಕುಂದಾಪ್ರ ಕನ್ನಡ ಭಾಷೆ ಸೊಬಗು ಕಾಣಸಿಗುತ್ತದೆ. ತಾಲ್ಲೂಕು ಬದಲಾದಾಗ ಕುಲಕಸಬುಗಳಿಗೆ ಅನುಗುಣವಾಗಿ ಕೆಲವು ಶಬ್ದಗಳು ಬದಲಾದರೂ ಕುಂದ ಕನ್ನಡ ಸಮೃದ್ಧಿ ಕಾಣುತ್ತದೆ ಎಂದು ಅವರು ಬಣ್ಣಿಸಿದರು.

ಒಂದು ಶತಮಾನದಲ್ಲಿ ಕುಂದ ಕನ್ನಡ ಭಾಷೆಯ ಬಳಕೆಗಳ ಸ್ಪಷ್ಟ ದಾಖಲೆ ಸಿಗುತ್ತದೆ. ತಮ್ಮ ಸಾಹಿತ್ಯದಲ್ಲಿ, ಪಾತ್ರಗಳ ಆಡು ಮಾತಿನಲ್ಲಿ, ಕುಂದಾಪ್ರ ಕನ್ನಡವನ್ನೇ ಬಳಕೆ ಮಾಡಿ ವೈದೇಹಿ, ಮಿತ್ರಾ ವೆಂಕಟರಾಜ್, ಗಾಯತ್ರಿ ನಾವಡ, ಮಾಧುರಿಕೃಷ್ಣ, ವರಮಹಾಲಕ್ಷ್ಮೀ ಹೊಳ್ಳ ಮುಂತಾದವರು ಯಶಸ್ವಿಯಾಗಿದ್ದಾರೆ ಎಂದು ಡಾ. ಭಂಡಾರಿ ಸದನದ ಗಮನ ಸೆಳೆದರು.
ರಾಜ್ಯದಲ್ಲಿ ಕೇವಲ ಒಂದು ಸಮುದಾಯಕ್ಕೆ ಮಾತ್ರ ಸೀಮಿತ ಭಾಷೆಗಳಿಗೇ ಅಕಾಡೆಮಿಗಳು ರಚನೆಯಾಗಿರುವಾಗ, ಬಹು ಸಮುದಾಯದ ವಿಸ್ತಾರವಾದ ಪ್ರದೇಶದಲ್ಲಿ ವ್ಯಾಪಿಸಿರುವ 25 ಲಕ್ಷಕ್ಕೂ ಹೆಚ್ಚು ಜನರ ಹೃದಯ ಭಾಷೆಯಾದ ಕುಂದಾಪುರ ಕನ್ನಡಕ್ಕೆ ಜನರು ಹೋರಾಟಕ್ಕೆ ಇಳಿಯುವ ಮೊದಲೇ ಅಕಾಡೆ‌ಮಿ ಸ್ಥಾಪಿಸುವ ಅನಿವಾರ್ಯತೆ ಇದೆ. ಆದ್ದರಿಂದ 25 ಲಕ್ಷ ಜನರ ಆಶಯದಂತೆ ‘ಕುಂದಾಪುರ ಕನ್ನಡ ಭಾಷಾ ಅಕಾಡಮಿ’ ಸ್ಥಾಪಿಸಬೇಕೆಂದು ಸರಕಾರವನ್ನು ಒತ್ತಾಯಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು