2:35 PM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆ: ಕಾಲೇಜು ಹುಡ್ಗಿಯರೇ ಈತನ ಟಾರ್ಗೆಟ್: ಅಪ್ರಾಪ್ತೆ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ

02/06/2024, 13:14

ಕುಂದಾಪುರ(reporterkarnataka.com): ಉಡುಪಿ ಜಿಲ್ಲೆಯ ಕುಂದಾಪುರದಲ್ಲೊಬ್ಬ ಮರಿ ಪ್ರಜ್ವಲ್ ರೇವಣ್ಣ ಪತ್ತೆಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿ ನಿಗಳನ್ನೇ ಗುರಿಯಾಗಿಟ್ಟುಕೊಂಡು ಅವರನ್ನು ದೈಹಿಕವಾಗಿ ಬಳಸಿಕೊಂಡು, ವೀಡಿಯೊ ಮಾಡಿ ಬೆದರಿಸಿ ಮತ್ತೆ ಮತ್ತೆ ಅತ್ಯಾಚಾರ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಕುಂದಾಪುರ ತಾಲೂಕಿನ ಅಮಾವಾಸೆಬೈಲ್ ಪೊಲೀಸ್ ಠಾಣೆ ವ್ಯಾಪ್ತಿಯ 25ರ ಹರೆಯದ ಉದ್ಯಮಿ ಶ್ರೇಯಸ್ ನಾಯ್ಕ ಎಂಬಾತನೇ ಈ ಮರಿ ಪ್ರಜ್ವಲ್ ರೇವಣ್ಣ. ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಈತನಿಂದ ಪದೇ ಪದೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಕೇಸು ದಾಖಲಾಗುತ್ತಿದ್ದಂತೆ ಶ್ರೇಯಸ್ ತಲೆ ಮರೆಸಿಕೊಂಡಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿ ಅದನ್ನು ಮೊಬೈಲ್ ನಲ್ಲಿ ಶೂಟಿಂಗ್ ಮಾಡಿಕೊಂಡಿದ್ದ. ನಂತರ ಆ ವೀಡಿಯೊವನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಶ್ರೇಯಸ್ ಇದೇ ರೀತಿ ಹಲವು ಮಂದಿ ಕಾಲೇಜು ವಿದ್ಯಾರ್ಥಿ ನಿಯರಿಗೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.
ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು