12:13 AM Wednesday16 - September 2026
ಬ್ರೇಕಿಂಗ್ ನ್ಯೂಸ್
ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ…

ಇತ್ತೀಚಿನ ಸುದ್ದಿ

ಕುಂಜತ್ತಬೈಲ್: ನೂತನ ಆರೋಗ್ಯ ಸೇವೆ ‘ನಮ್ಮ ಕ್ಲಿನಿಕ್’ ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

20/02/2023, 00:38

ಸುರತ್ಕಲ್(reporterkarnataka.com):
ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕುಂಜತ್ತಬೈಲ್ 13ನೇ ಉತ್ತರ ವಾರ್ಡ್ ನಲ್ಲಿ ‘ನಮ್ಮ ಕ್ಲಿನಿಕ್’ ನೂತನ ಆರೋಗ್ಯ ಸೇವೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರ ದೂರ ಇರುವ ಕಡೆ ನಮ್ಮ ಕ್ಲಿನಿಕ್ ಎಲ್ಲಾ ಸೌಲಭ್ಯ ಒದಗಿಸುವಲ್ಲಿ ಶಕ್ತವಾಗಿದೆ.


ಮಕ್ಕಳಿಂದ ಹಿರಿಯವರೆಗೆ ಅಗತ್ಯ ಹಾಗೂ ತುರ್ತು ಚಿಕಿತ್ಸೆ ನೀಡಲು ಬೇಕಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ದಿನವಿಡೀ ವೈದ್ಯರು ಲಭ್ಯರಿರುತ್ತಾರೆ. ಸಾಮಾನ್ಯ ಜನರು ಆರೋಗ್ಯ. ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರಕಾರ ಈ ಯೋಜನೆ ಜಾರಿಗೆ ತಂದಿದೆ ಎಂದರು.

ಡಾ.ದೃತಿ ಪ್ರಾಸ್ತಾವಿಕ ಮಾತುಗಳನ್ನಾಡಿ ಕ್ಲಿನಿಕ್ ನಲ್ಲಿ ಸಿಗುವ ಸೌಲಭ್ಯದ ಮಾಹಿತಿ ನೀಡಿದರು.

ಸ್ಥಳೀಯ ಮನಪಾ ಸದಸ್ಯರಾದ ಶರತ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವ ಡಾ.ಕಿಶೋರ್ ಕುಮಾರ್,ಆರ್ ಸಿ ಎಚ್ ಅಧಿಕಾರಿ ಡಾ.ರಾಜೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ಆಡಳಿತ ವೈದ್ಯಾಧಿಕಾರಿ ಡಾ.ಚೈತ್ರ ಎ.ಸಿ,ನಮ್ಮ ಕ್ಲಿನಿಕ್ ನ ಡಾ.ಧೃತಿ , ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು