ಇತ್ತೀಚಿನ ಸುದ್ದಿ
ಕುಪ್ಪೆಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 13.90 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಕೊಠಡಿ ಉದ್ಘಾಟನೆ
06/01/2024, 19:44
ಮಂಗಳೂರು(reporterkarnataka.com): ಕುಪ್ಪೆಪದವು ಕಿಲೆಂಜಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 13.90 ಲಕ್ಷ ಮೊತ್ತ ವೆಚ್ಚದಲ್ಲಿ ವಿವೇಕ ಶಾಲಾ ಯೋಜನೆಯಡಿ ನಿರ್ಮಿತವಾಗಿರುವ ನೂತನ ಕೊಠಡಿಯ ಉದ್ಘಾಟನೆಯನ್ನು ಶಾಸಕ ಡಾ.ವೈ.ಭರತ್ ಶೆಟ್ಟಿ ನೆರವೇರಿಸಿದರು.
ಶಾಲಾ ಮಕ್ಕಳ ಶೈಕ್ಷಣಿಕ ಚಟುವಟಿಕೆಯ ಬಗ್ಗೆ ಪ್ರಶಂಶೆ ವ್ಯಕ್ತಪಡಿಸಿ, ಶುಭಹಾರೈಸಿದರು.
ಸ್ಥಳೀಯ ಪಂಚಾಯತ್ ಉಪಾಧ್ಯಕ್ಷರು, ಪಂಚಾಯಿತಿ ಸದಸ್ಯರುಗಳು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮತ್ತು ಸದಸ್ಯರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮತ್ತು ಮಕ್ಕಳು ಉಪಸ್ಥಿತರಿದ್ದರು.