ಇತ್ತೀಚಿನ ಸುದ್ದಿ
ಕುಪ್ಪೆಪದವು ಶ್ರೀ ದುರ್ಗೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ
13/02/2023, 19:20
ಮಂಗಳೂರು(reporterkarnataka.com): ಕುಪ್ಪೆಪದವು ಶ್ರೀ ದುರ್ಗೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವ ಭಾನುವಾರದ ಧಾರ್ಮಿಕ ವಿಧಿವಿಧಾನಗಳು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ, ಶಾಸಕರೂ ಆದ ಡಾ. ವೈ ಭರತ್ ಶೆಟ್ಟಿ ಮುಂದಾಳತ್ವದಲ್ಲಿ ಸಂಪ್ರದಾಯಬದ್ಧವಾಗಿ ಜರುಗಿತು.
ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಹಿಂದೂ ಧರ್ಮದ ಸಂಸ್ಕೃತಿ, ಧಾರ್ಮಿಕ ಆಚಾರ, ವಿಚಾರಗಳು, ನಂಬಿಕೆ, ಸಂಪ್ರದಾಯಗಳ ಬಗ್ಗೆ ಮಾತನಾಡಿದರು. ಆ ಬಳಿಕ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಬೆಳಿಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ರಾಜೇಶ್ ನಾಯ್ಕ್ ಭೇಟಿ ನೀಡಿದರು.
ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ವಿವಿಧ ಸಮಿತಿಗಳ ಪ್ರಮುಖರು, ಗಣ್ಯರು, ಮುಖಂಡರು, ಭಕ್ತರು ಉಪಸ್ಥಿತರಿದ್ದರು.